Tuesday, November 18, 2025

ಚಿತ್ರದುರ್ಗ ವೇದಾಧ್ಯಯನ ವಿದ್ಯಾರ್ಥಿ ಮೇಲೆ ಹಲ್ಲೆ: ಶಿಕ್ಷಕನ ವಿರುದ್ಧ ಕ್ರಮಕ್ಕೆ ರಾಮಲಿಂಗಾರೆಡ್ಡಿ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿತ್ರದುರ್ಗದ ವೇದಾಧ್ಯಯನ ಶಾಲೆಯಲ್ಲಿ 9 ವರ್ಷದ ವಿದ್ಯಾರ್ಥಿ ಮೇಲೆ ಶಿಕ್ಷಕ ವೀರೇಶ್ ಹಿರೇಮಠ್ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಶಿಕ್ಷಕ ಹಾಗೂ ಸಂಸ್ಥೆಯ ಆಡಳಿತ ಮಂಡಳಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಕೂಡಲೇ ವರದಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು ಬಿಹಾರದ ಚುನಾವಣೆಗೆ ಹಣ ಸಂಗ್ರಹ ಮಾಡುತ್ತಿದ್ದಾರೆಂಬ ಆರೋಪಕ್ಕೆ ಪ್ರತಿಕ್ರಿಯಿಸಿದ್ದು, ನಾವು ಕೆಲ ದಿನಗಳ ಹಿಂದೆ ಸಿಎಂನೊಂದಿಗೆ ನಡೆಸಿದ ಸಭೆಯಲ್ಲಿ ಮಾತಾಡಿದ್ದು ಬೆಂಗಳೂರಿನ ಕಾರ್ಪೋರೇಷನ್‌ ಚುನಾವಣೆ ಕುರಿತು ಎಂದಿದ್ದಾರೆ.

ಅಷ್ಟೇ ಅಲ್ಲದೇ ಬಿಜೆಪಿಯವರು ಮಾಡುವ ಯಾವ ಆರೋಪಗಳಿಗೂ ಬೇಸ್‌ ಇರುವುದಿಲ್ಲ. ಅವರು ತಳಪಾಯಿಲ್ಲದೆ ಮನೆ ಕಟ್ಟುವವರು ಎಂದು ವಾಗ್ದಾಳಿ ನಡೆಸಿದ್ದಾರೆ.

error: Content is protected !!