ಹೊಸದಿಗಂತ ಡಿಜಿಟಲ್ ಡೆಸ್ಕ್
ಚಿತ್ರಕಲಾ ಪರಿಷತ್ತು ಕುಮಾರಕೃಪ ರಸ್ತೆಯಲ್ಲಿ ಭಾನುವಾರ 22ನೇ ಚಿತ್ರ ಸಂತೆಯನ್ನು ಆಯೋಜಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 6ರಿಂದ ರಾತ್ರಿ 9ರವರೆಗೆ ಕುಮಾರ ಕೃಪಾ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಕುಮಾರಕೃಪಾ ರಸ್ತೆಯಲ್ಲಿ ಈ ಭಾನುವಾರ 22ನೇ ಚಿತ್ರಸಂತೆ ನಡೆಯುವ ಕಾರಣ, ಕುಮಾರಕೃಪಾ ರಸ್ತೆಯ ವಿಂಡ್ಸ್ರ್ ಮ್ಯಾನರ್ ವೃತ್ತದಿಂದ ಶಿವಾನಂದ ವೃತ್ತದವರೆಗೆ (ಈಶಾನ್ಯ ದಿಕ್ಕಿನಿಂದ ನೈಋತ್ಯ ದಿಕ್ಕಿನ ಕಡೆಗೆ) ಅಂದು ಎಲ್ಲ ಮಾದರಿಯ ವಾಹನಗಳ ಸಂಚಾರ ನಿಷೇಧಿಸಲಾಗಿದ್ದು, ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ. ಅಲ್ಲದೆ ಚಿತ್ರಸಂತೆಗೆ ಬರುವವರಿಗೆ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಸಾಧ್ಯವಾದಷ್ಟು ಎಲ್ಲರೂ ಸಾರ್ವಜನಿಕ ಸಾರಿಗೆ ಬಳಸಬೇಕು ಎಂದು ಬೆಂಗಳೂರು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.