Monday, November 3, 2025

ಚಿತ್ತಾಪುರ ಪಥಸಂಚಲನ: ಇಂದು ಕಲಬುರಗಿ ಹೈಕೋರ್ಟ್ ಪೀಠದಲ್ಲಿ ವಿಚಾರಣೆ

ಹೊಸದಿಗಂತ ವರದಿ ಕಲಬುರಗಿ:

ರಾಜ್ಯಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾದ ಜಿಲ್ಲೆಯ ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ಅನುಮತಿ ಕೋರಿ ಇಂದು ಕಲಬುರಗಿ ವಿಭಾಗೀಯ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯಲಿದೆ.

ಹೈಕೋರ್ಟ್ ಸೂಚನೆಯಂತೆ ಇಂದು ಮಧ್ಯಾಹ್ನ 2:30ಕ್ಕೆ ವಿಚಾರಣೆ ಆರಂಭವಾಗಲಿದ್ದು, ಸರ್ಕಾರದ ಪರವಾಗಿ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸುತ್ತಿದ್ದರೆ, ಆರೆಸ್ಸೆಸ್ ಪರವಾಗಿ ವಕೀಲರಾದ ಅರುಣ್ ಶ್ಯಾಂ ವಾದ ಪ್ರತಿವಾದ ಮಂಡಿಸಲಿದ್ದಾರೆ.

ಅ.19ಕ್ಕೆ ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ಅನುಮತಿ ನೀಡುವಂತೆ ಸ್ಥಳೀಯ ಆಡಳಿತಕ್ಕೆ ಮನವಿ ಸಲ್ಲಿಸಲಾಗಿತ್ತು.ಆದರೆ, ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆಯಿದೆ ಎಂದು ಸ್ಥಳೀಯ ಜಿಲ್ಲಾಡಳಿತ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ಹಿನ್ನೆಲೆ, ಆರೆಸ್ಸೆಸ್ ಹೈಕೋರ್ಟ್ ಮೊರೆ ಹೋಗಿದೆ.

error: Content is protected !!