ಚಿತ್ರದುರ್ಗದಲ್ಲಿ ಕ್ಲೊರಿನ್ ಗ್ಯಾಸ್ ಸೋರಿಕೆ: 20ಕ್ಕೂ ಹೆಚ್ಚು ಜನ ಅಸ್ವಸ್ಥ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಎಪಿಎಂಸಿ ಬಳಿ ನೀರು ಶುದ್ಧೀಕರಣಕ್ಕೆ ಬಳಸುವ ಕ್ಲೊರಿನ್ ಗ್ಯಾಸ್ ಸೋರಿಕೆಯಾಗಿ 20ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವಂತಹ ಘಟನೆ ಸಂಭವಿಸಿದೆ.

ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅಸ್ವಸ್ಥರನ್ನು ಹೊಸದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ, ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!