ಬೆಂಗಳೂರಿನಲ್ಲಿ ಕಾಲರಾ ಹೆಚ್ಚಳ: ಬಿಬಿಎಂಪಿಯಿಂದ ಮಾರ್ಗಸೂಚಿ ಬಿಡುಗಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಅಭಾವದ ಜೊತೆ ಕಾಲರಾ ತಲೆನೋವು ಆರಂಭವಾಗಿದೆ.

ಮಲ್ಲೇಶ್ವರ ವಾಸಿ 27 ವರ್ಷ ವಯಸ್ಸಿನ ಮಹಿಳೆಯೊಬ್ಬರು ಅತಿಸಾರಭೇದಿ ಮತ್ತು ವಾಂತಿ ಲಕ್ಷಣಗಳೊಂದಿಗೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆ ವೈದ್ಯರು, ಕಾಲರಾ ಲಕ್ಷಣ ಇರುವುದಾಗಿ ಹೇಳಿದ್ದಾರೆ.

ಘಟನೆ ಬೆನ್ನಲ್ಲೆ ಬಿಬಿಎಂಪಿ ಎಚ್ಚೆತ್ತುಕೊಂಡಿದ್ದು, ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಅಲ್ಲದೆ, ಮಾರ್ಗಸೂಚಿಯನ್ನೂ ಕೂಡ ಬಿಡುಗಡೆ ಮಾಡಿದೆ.

  • ರೋಗ ಹರುಡುವಿಕೆ ನಿಭಾಯಿಸಲು ವಿಧಾನಸಭಾ ಕ್ಷೇತ್ರವಾರು, ಕ್ಷೇತ್ರ ಮಟ್ಟದಲ್ಲಿ ಕ್ಷಿಪ್ರ ಪ್ರತಿಕ್ರಿಯೆ ತಂಡ ರಚನೆ
  • ಎಲ್ಲಾ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಕೆಫೆಗಳ ಮಾಲೀಕರಿಗೆ, ಗ್ರಾಹಕರಿಗೆ ಕುಡಿಯಲು ಕಾಯಿಸಿದ ನೀರನ್ನ ವಿತರಿಸಲು ಸಲಹೆ ನೀಡಲಾಗಿದೆ.
  • ಪಾಲಿಕೆ ವ್ಯಾಪ್ತಿಯ ಎಲ್ಲಾ ಖಾಸಗಿ ಆಸ್ಪತ್ರೆ, ಖಾಸಗಿ ಲ್ಯಾಬ್‌ಗಳು ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಕಾಲರಾ ತಪಾಸಣೆಗೆ ಸೂಚನೆ.
  • ಶಂಕಿತ ಪ್ರಕರಣಗಳು ವರದಿಯಾದಲ್ಲಿ ಸರ್ಕಾರ ನಿಗದಿಪಡಿಸಿರುವ ಐ.ಹೆಚ್.ಐ.ಪಿ (IHIP) ತಂತ್ರಾಶದಲ್ಲಿ ಕಡ್ಡಾಯವಾಗಿ ವರದಿ ಮಾಡುವಂತೆ ಸೂಚನೆ.
  • ಕುಡಿಯುವ ನೀರಿನ ಬಗ್ಗೆ ಹೆಚ್ಚಿನ ವಿಶ್ಲೇಷಣೆಗಾಗಿ ನೀರಿನ ಮಾದರಿಗಳನ್ನ ಹಿರಿಯ ಆರೋಗ್ಯ ಪರಿವೀಕ್ಷಕರು ಸಂಗ್ರಹಿಸಿ PHI ಲ್ಯಾಬ್‌ಗೆ ಪ್ರತಿನಿತ್ಯ ಕಳುಹಿಸಲು ಸೂಚನೆ.
  • ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಓಆರ್​ಎಸ್​ ಕಾರ್ನರ್‌ಗಳನ್ನ ಸ್ಥಾಪಿಸುವ ಮೂಲಕ ಆಸ್ಪತ್ರೆಗೆ ಬರುವ ಹೊರರೋಗಿಗಳಲ್ಲಿ ಜಾಗೃತಿ ಮೂಡಿಸುವುದು.
  • ನೀರಿನಿಂದ ಹರಡುವ ರೋಗಗಳನ್ನ ತಡೆಗಟ್ಟುವ ಬಗ್ಗೆ ಆರೋಗ್ಯ ಶಿಕ್ಷಣ ನೀಡುವುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!