spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಮತ್ತೊಮ್ಮೆ ಮುನ್ನುಡಿ ಬರೆಯಿರಿ: ಸಚಿವ ಬಿ.ಸಿ.ಪಾಟೀಲ

- Advertisement -Nitte

ಹೊಸ ದಿಗಂತ ವರದಿ, ಹಾವೇರಿ:

ಭಾರತೀಯ ಜನತಾಪಕ್ಷದ ಅಭ್ಯರ್ಥಿಯಾದ ಶಿವರಾಜ ಸಜ್ಜನರ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಆಯ್ಕೆ ಮಾಡುವ ಮೂಲಕ ಹಾನಗಲ್ಲ ಕ್ಷೇತ್ರದ ಅಭಿವೃದ್ಧಿಗೆ ಮತ್ತೊಮ್ಮೆ ಮುನ್ನುಡಿ ಬರೆಯುವ ಮೂಲಕ ಹಿಂದಿನಂತೆ ಇನ್ನು ಮುಂದೆಯೂ ಅಭಿವೃದ್ಧಿಗೆ ಅವಕಾಶ ಕಲ್ಪಿಸಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ಜಿಲ್ಲೆಯ ಹಾನಗಲ್ಲ ತಾಲೂಕಿನ ಬೆಂಚವಳ್ಳಿ, ಹಸನಬಾದ್ ಗುಡುಗುಡೆ ಯಲ್ಲಾಪೂರ ಹಾಗೂ ಹುಲ್ಲತ್ತಿ ಗ್ರಾಮಗಳಲ್ಲಿ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶೀವರಾಜ ಸಜ್ಜನರ ಪರವಾಗಿ ಮತಯಾಚನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಾಯಕರಾಗಿದ್ದ ದಿವಂಗತ ಸಿ.ಎಂ.ಉದಾಸಿ ಅವರು ನಿಧನದಿಂದ ಈ ಚುನಾವಣೆ ಜರಗುತ್ತಿದೆ, ಅವರ ಆತ್ಮಕ್ಕೆ ಶಾಂತಿ ದೊರೆಯಬೇಕಾದರೆ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಅವರನ್ನು ಆಯ್ಕೆ ಮಾಡಬೇಕೆಂದು ಕ್ಷೇತ್ರದ ಮತದಾರರಲ್ಲಿ ವಿನಂತಿಸಿಕೊಂಡರು. ಅವರ ಅಭಿವೃದ್ಧಿ ಕಾರ್ಯಗಳನ್ನು ಶಿವರಾಜ ಸಜ್ಜನರ ಮುಂದುವರೆಸಿಕೊಂಡು ಹೇಗುತ್ತಾರೆ ಎಂದು ತಿಳಿಸಿದರು.
ಜಿಲ್ಲೆಯವರೇ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೈ ಬಲಪಡಿಸುವುದಕ್ಕೆ, ರಾಜ್ಯ ಹಾಗೂ ಹಾನಗಲ್ಲ ಕ್ಷೇತ್ರದ ಅಭಿವೃದ್ಧಿಗೆ ಶಿವರಾಜ ಸಜ್ಜನ ಆಯ್ಕೆ ಬಹಳ ಮುಖ್ಯವಾಗಿದೆ ಎಂದರು.
ಹಾನಗಲ್ಲ ಕ್ಷೇತ್ರದ ಜನತೆ ಬಹಳ ಭುದ್ದಿವಂತರು ಯಾರನ್ನು ಯಾವ ಸಂದರ್ಭದಲ್ಲಿ ಆಯ್ಕೆ ಮಾಡಬೇನ್ನುವುದನ್ನು ಬಹಳ ವಿಚಾರ ಮಾಡಿ ಆಯ್ಕೆ ಮಾಡುತ್ತಾರೆ. ಪ್ರಸಕ್ತ ರಾಜ್ಯದಲ್ಲಿ ಬಿಜೆಪಿ ಅಧಿಕಾರಲ್ಲಿದೆ. ಮುಖ್ಯಮಂತ್ರಿಗಳೂ ಸಹ ಇದೇ ಜಿಲ್ಲೆಯವರಾಗಿದ್ದಾರೆ ಹೀಗಾಗಿ ಈ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ತೊಂದರೆ ಆಗುವುದಿಲ್ಲ ಆದ್ದರಿಂದ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಅವರನ್ನು ಆಯ್ಕೆ ಮಾಡುವಂತೆ ಅವರು ಕೇಳಿಕೊಂಡರು.
ವೇದಕೆಯಲ್ಲಿ ಮಾಜಿ ಶಾಸಕ ಸುರೇಶಗೌಡ ಪಾಟೀಲ, ಶಂಕರಗೌಡ, ಎಂ.ಎನ್.ಪಾಟೀಲ, ಮಲ್ಲನಗೌಡರ, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಅನೇಕರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss