ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಅರೆಸ್ಟ್ ಆಗಿದ್ದ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ಗೆ ತೆಲಂಗಾಣ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಸಹ ಕೊರಿಯೋಗ್ರಾಫರ್ ಮೇಲೆ ಲೈಂಗಿಕ ದೌರ್ಜನ್ಯಎಸಗಿದ ಆರೋಪದ ಮೇಲೆ ಜಾನಿ ಮಾಸ್ಟರ್ ಅವರನ್ನು ಕಳೆದ ತಿಂಗಳು ಸೆಪ್ಟೆಂಬರ್‌ನಲ್ಲಿ ಹೈದರಾಬಾದ್ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ಸಂಬಂಧ ಇಂದು (ಅ.24) ಜಾನಿ ಮಾಸ್ಟರ್‌ಗೆ ಜಾಮೀನು ಸಿಕ್ಕಿದೆ.
ಅಂದಹಾಗೆ, ಪುಷ್ಪ, ಕನ್ನಡದ ಯುವರತ್ನ ಸೇರಿದಂತೆ ಹಲವಾರು ಸಿನಿಮಾಗಳಿಗೆ ಜಾನಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿದ್ದಾರೆ.