Wednesday, December 6, 2023

Latest Posts

ಮಂಗಳೂರಿಗೆ ಚೌಕೀದಾರ್: ದಕ್ಷಿಣ ಕನ್ನಡ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹೈ ಅಲರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಂದರು ನಗರಿ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಕ್ಷಣ ಗಣನೆ ಆರಂಭವಾಗಿರುವಂತೆಯೇ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಕಾರ್ಯಕ್ರಮ ಯಶಸ್ವಿಗೆ ಭರ್ಜರಿ ಸಿದ್ಧತೆ ನಡೆಸಿಕೊಂಡಿದೆ.

ಬುಧವಾರ ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮಧ್ಯಾಹ್ನ ಒಂದು ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ಮುಂಚಿತವಾಗಿಯೇ ಮೈದಾನಕ್ಕೆ ಆಗಮಿಸಬೇಕು ಎಂದು ಅವರು ಹೇಳಿದ್ದಾರೆ. ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಕಡ್ಡಾಯ ಭಾಗವಹಿಸುವಂತೆ ನಿರ್ದೇಶನ ನೀಡಿಲ್ಲ, ಮನವಿಯನ್ನಷ್ಟೇ ಮಾಡಲಾಗಿದೆ. ಸುರಕ್ಷತೆ ನಿಟ್ಟಿನಲ್ಲಿ ಕೆಲವೊಂದು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದವರು ತಿಳಿಸಿದ್ದಾರೆ.

ಕಾರ್ಯಕ್ರಮ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗುತ್ತಿದೆ. ಭದ್ರತೆಗಾಗಿ ಸಿಎಆರ್, ಕೆಎಸ್‌ಆರ್‌ಪಿ, ಹೋಮ್‌ಗಾರ್ಡ್ ಸಹಿತ ವಿವಿಧ ಘಟಕಗಳ ಅಧಿಕಾರಿ, ಸಿಬಂದಿಗಳನ್ನು ನಿಯೋಜನೆ ಮಾಡಲಾಗುತ್ತದೆ. ಆಕ್ಷೇಪಾರ್ಹ ವಸ್ತುಗಳನ್ನು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ತರುವಂತಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಇದೇ ಸಂದರ್ಭ ಹೇಳಿದರು.

ಇನ್ನು ಮಂಗಳೂರು ಕಮಿಷನರೆಟ್ ವ್ಯಾಪ್ತಿಯ ಒಂಭತ್ತು ಜಂಕ್ಷನ್‌ಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗುತ್ತದೆ. ಪಾರ್ಕಿಂಗ್‌ಗಾಗಿ ಈಗಾಗಲೇ 15 ಕಡೆ ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಅವರು ಇದೇ ವೇಳೆ ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!