ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಪ್ರಮುಖ ಆಲ್‌ರೌಂಡರ್ ಆಟಗಾರ ಕ್ರಿಸ್ ಮೋರಿಸ್ ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.
ದಿಢೀರ್ ಆಗಿ ವಿದಾಯ ಘೋಷಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಹೇಳಿಕೊಂಡಿದ್ದಾರೆ.
ಇಂದು ನಾನು ನನ್ನ ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಹಿಂದೆ ಸರಿದಿದ್ದೇನೆ. ನನ್ನ ಈ ಪಯಣದಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದ. ಕ್ರಿಕೆಟ್ ಲೈಫ್ ಒಂದು ಫನ್ ರೈಡ್ ಆಗಿತ್ತು.ಟೈಟಾನ್ಸ್ ಕ್ರಿಕೆಟ್‌ನ ಕೋಚ್ ಆಗಿ ಇನ್ಮುಂದೆ ಕಾರ್ಯನಿರ್ವಹಿಸುತ್ತೇನೆ ಎಂದಿದ್ದಾರೆ.
ಐಪಿಎಲ್ 13 ನೇ ಆವೃತ್ತಿಯಲ್ಲಿ ಕ್ರಿಸ್ ಆರ್‌ಸಿಬಿ ಪರ ಆಡಿದ್ದರು. 2020 ರಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಸೇಲ್ ಆದ ಆಟಗಾರ ಇವರೇ ಆಗಿದ್ದರು.