ಕ್ರಿಸ್‌ಮಸ್‌ ಸ್ಪೆಶಲ್‌: ಬೆಂಗಳೂರು-ಕಲಬುರಗಿ-ಮಂಗಳೂರಿಗೆ ವಿಶೇಷ ರೈಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕ್ರಿಸ್​ಮಸ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು-ಕಲಬುರಗಿ ಮತ್ತು ಯಶವಂತಪುರ-ಮಂಗಳೂರು ನಿಲ್ದಾಣಗಳ ನಡುವೆ ಎರಡೂ ದಿಕ್ಕಿನಲ್ಲಿ ಎರಡು ಟ್ರಿಪ್​ ವಿಶೇಷ ಎಕ್ಸ್​​ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಸಾಮಾಜಿಕ ಮಾಧ್ಯಮ ಎಕ್ಸ್​ ಮುಖಾಂತರ ನೈಋತ್ಯ ರೈಲ್ವೆ ಮಾಹಿತಿ ಹಂಚಿಕೊಂಡಿದೆ.

  1. ರೈಲು ಸಂಖ್ಯೆ 06533 ಎಸ್‌ಎಂವಿಟಿ ಬೆಂಗಳೂರು-ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 24 ರಂದು ರಾತ್ರಿ 9.15ಕ್ಕೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಟು, ಮರುದಿನ ಬೆಳಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ.
  2. ಪುನಃ ಇದೇ ರೈಲು (06590) ಕಲಬುರಗಿಯಿಂದ ಡಿಸೆಂಬರ್ 25 ರಂದು ಬೆಳಿಗ್ಗೆ 9.34ಕ್ಕೆ ಹೊರಟು, ಅದೇ ದಿನ ರಾತ್ರಿ 8 ಗಂಟೆಗೆ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ.

ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ಶಹಾಬಾದ್ ನಿಲ್ದಾಣಗಳಲ್ಲಿ ನಿಲ್ಲುತ್ತದೆ.

  1. ರೈಲು ಸಂಖ್ಯೆ 06505 ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 23 ಮತ್ತು 27 ರಂದು ರಾತ್ರಿ 11.55 ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗ್ಗೆ 11.45 ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
  2. ಮರಳಿ, ಇದೇ ರೈಲು (06506) ಡಿಸೆಂಬರ್ 24 ಮತ್ತು 28 ರಂದು ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಮಧ್ಯಾಹ್ನ 1:00 ಗಂಟೆಗೆ ಹೊರಟು, ಅದೇ ದಿನ ರಾತ್ರಿ 10.30 ಕ್ಕೆ ಯಶವಂತಪುರ ತಲುಪಲಿದೆ.

ಈ ರೈಲು ಕುಣಿಗಲ್‌, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!