ಕ್ಷಣ ಕ್ಷಣಕ್ಕೂ ಕುತೂಹಲ ಕೆರಳಿಸಿದ ಛಬ್ಬಿ ನಡೆ: ಬೆಂಗಳೂರು ಟು ದೆಹಲಿ!

ಹೊಸದಿಗಂತ ವರದಿ ಹುಬ್ಬಳ್ಳಿ:

ಕಲಘಟಗಿ- ಅಳ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಂಚಿತ ನಾಗರಾಜ ಛಬ್ಬಿ ನಡೆ ಕ್ಷಣ ಕ್ಷಣಕ್ಕೂ ಕುತೂಹಲ ಕೆರಳಿಸುತ್ತಿದ್ದು, ಎರಡು ದಿನ ಬೆಂಗಳೂರಿನಲ್ಲಿ ಠಿಕಾಣಿ ಹೂಡಿದ್ದ ಛಬ್ಬಿ ಶನಿವಾರ ದೆಹಲಿಗೆ ಹಾರಿದ್ದಾರೆ.

ಕಾಂಗ್ರೆಸ್‌ನಿಂದ ಟಿಕೆಟ್ ತಪ್ಪಿರುವ ಹಿನ್ನೆಲೆಯಲ್ಲಿ ಶತಾಯ ಗತಾಯ ಬಿಜೆಪಿ ಟಿಕೆಟ್ ಪಡೆಯಲು ಯತ್ನಿಸುತ್ತಿದ್ದು, ದೆಹಲಿ ಬಿಜೆಪಿ ನಾಯಕರ ಭೇಟಿಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ ಶಾ, ಪ್ರಹ್ಲಾದ ಜೋಶಿ, ಜೆ.ಪಿ .ನಡ್ಡಾ ಅವರ ಭೇಟಿಗೆ ಸಮಯ ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತ್ತ ಕಲಘಟಗಿಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಒಟ್ಟಾಗಿ ಸೇರಿ ತಮ್ಮಲ್ಲೇ ಒಬ್ಬರಿಗೆ ಟಿಕೆಟ್ ನೀಡಬೇಕು. ಇಲ್ಲವಾದರೆ ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಸುವುತ್ತೇವೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!