ಬಲವಂತದ ಮತಾಂತರಕ್ಕೆ ಯತ್ನ: ಕ್ರೈಸ್ತ ಪಾದ್ರಿ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ವ್ಯಕ್ತಿಯೊಬ್ಬನನ್ನು ಬಲವಂತವಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದ್ದ ಆರೋಪದ ಮೇಲೆ ಉತ್ತರ ಪ್ರದೇಶದ ರಾಮಪುರದ ಚರ್ಚ್‌ನ ಪಾದ್ರಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಪಾದ್ರಿ ಪೊಲೊ ಮೆಸ್ಸಿಹ್ ವಿರುದ್ಧ ಉತ್ತರ ಪ್ರದೇಶ ಕಾನೂನುಬಾಹಿರ ಧರ್ಮ ಪರಿವರ್ತನೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಸ್ಥಳೀಯ ನಿವಾಸಿ ರಾಜೀವ್ ಯಾದವ್ ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಪಾದ್ರಿಯನ್ನು ಜೈಲಿಗೆ ಕಳುಹಿಸಲಾಗುವುದು ಎಂದು ರಾಂಪುರದ ಹೆಚ್ಚುವರಿ ಡಿಸಿಪಿ ಸಂಸಾರ್ ಸಿಂಗ್ ತಿಳಿಸಿದ್ದಾರೆ.
“ಸಿವಿಲ್ ಲೈನ್ಸ್ ನಿವಾಸಿ ಪೋಲೋ ಮೆಸ್ಸಿಹ್ ಎಂಬ ಪಾದ್ರಿ ಇತರ ಸಮುದಾಯದ ಜನರನ್ನು ಒಟ್ಟುಗೂಡಿಸಿ ತನ್ನನ್ನು ಮತಾಂತರಿಸಲು ಪ್ರಯತ್ನಿಸುತ್ತಿದ್ದಾರೆ ರಾಜೀವ್‌ ಯಾದವ್ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು” ಎಂದು ಡಿಸಿಪಿ ಹೇಳಿದರು. ಪೊಲೀಸರು ತ್ವರಿತ ಕ್ರಮ ಕೈಗೊಂಡು ಪಾದ್ರಿಯನ್ನು ಬಂಧಿಸಿದ್ದಾರೆ ಎಂದು ಸಿಂಗ್ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!