ಹೊಸದಿಗಂತ ಡಿಜಿಟಲ್ ಡೆಸ್ಕ್
ಕ್ರಿಸ್‌ಮಸ್ ಹಬ್ಬ ಮುಗಿದ ಬೆನ್ನಲ್ಲೇ ಕರ್ನಾಟಕದ ಮೈಸೂರು ಜಿಲ್ಲೆಯ ಚರ್ಚ್ ಒಂದನ್ನು ಧ್ವಂಸಗೊಳಿಸಲಾಗಿದ್ದು, ಇನ್ನೂ ಅಪರಿಚಿತ ವ್ಯಕ್ತಿಗಳ ತಂಡವೊಂದು ಯೇಸುಕ್ರಿಸ್ತನ ಪ್ರತಿಮೆಯನ್ನು ಹಾನಿಗೊಳಿಸಿ ಪರಾರಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು ನಗರದಿಂದ ಸುಮಾರು 70 ಕಿಮೀ ದೂರದಲ್ಲಿರುವ ಪಿರಿಯಾಪಟ್ಟಣದಲ್ಲಿ ಈ ಘಟನೆ ನಡೆದಿದ್ದು. ಏಸು ಪ್ರತಿಮೆ ಧ್ವಂಸಗೊಳಿಸಿದ ಫೋಟೋಗಳು ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ಶೇರ್ ಆಗಿವೆ. ಈ ಬಗ್ಗೆ ಪ್ರತಿಕ್ರಿಸಿರುವ ಮೈಸೂರು ಪೊಲೀಸ್ ಅಧೀಕ್ಷಕಿ ಸೀಮಾ ಲಾಟ್ಕರ್, ಅಪರಾಧದ ತನಿಖೆಗಾಗಿ ತಂಡವನ್ನು ರಚಿಸಲಾಗಿದೆ. ಆರೋಪಿಗಳ ಪತ್ತೆಗಾಗಿ ಲಭ್ಯವಿರುವ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ