ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ಅಪರಾಧ ತನಿಖಾ ದಳ (ಸಿಐಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಹಿಹಿರೇನಂದಿ ಗ್ರಾಮದ ಬಳಿ ಇರುವ ರಮೇಶ ಜಾರಕಿಹೊಳಿ ಮಾಲೀಕತ್ವದ ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ (Soubhagylaxmi sugar pvt.ltd) ಮೇಲೆ ಸಿಐಡಿ ಅಧಿಕಾರಿಗಳ ತಂಡವು ದಾಳಿ ಮಾಡಿ ದಾಖಲೆ ಪರಿಶೀಲನೆ ಮಾಡಲಾಗುತ್ತಿದೆ.

ಈ ಕಾರ್ಖಾನೆಯನ್ನು ಸ್ಥಾಪಿಸಲು 439 ಕೋಟಿ ರೂಪಾಯಿಯನ್ನು ಅಪೆಕ್ಸ್ ಬ್ಯಾಂಕ್ ನಲ್ಲಿ ಸಾಲ ಪಡೆಯಲಾಗಿದೆ. ಆದರೆ, ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಜನವರಿ 5ರಂದು ದೂರು ದಾಖಲಿಸಲಾಗಿತ್ತು. ಅಪೆಕ್ಸ್ ಬ್ಯಾಂಕ್ ಮ್ಯಾನೇಜರ್ ರಾಜಣ್ಣ ಮುತ್ತಶೆಟ್ಟಿ ಅವರು ನೀಡಿದ ದೂರಿನ ಆಧಾರದಲ್ಲಿ ಸೆಕ್ಷನ್ 406,420 ಅನ್ವಯ ದೂರು ದಾಖಲು ಮಾಡಿಕೊಳ್ಳಲಾಗಿತ್ತು.
ರಾಜ್ಯ ಸರ್ಕಾರವು ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿತ್ತು. ಸಿಐಡಿ ಅಧಿಕಾರಿಗಳ ತಂಡವು ಮಂಗಳವಾರ ಕಾರ್ಖಾನೆ ಮೇಲೆ ದಾಳಿ ದಾಖಲೆ ಪರಿಶೀಲನೆ ಮಾಡುಯತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!