ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂಧ್ರ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಅವರ ವಿಚಾರಣೆಯನ್ನು ಅಪರಾಧ ತನಿಖಾ ದಳ (ಸಿಐಡಿ) ಶನಿವಾರ ಜೈಲಿನಲ್ಲೇ ಆರಂಭಿಸಿದೆ. 12 ಅಧಿಕಾರಿಗಳನ್ನೊಳಗೊಂಡ ಸಿಐಡಿ ತಂಡ ಜೈಲಿನಲ್ಲೇ ಬೆಳಿಗ್ಗೆ 9.30ಕ್ಕೆ ವಿಚಾರಣೆ ಆರಂಭಿಸಿದೆ.
ಕೌಶಲ್ಯಾಭಿವೃದ್ಧಿ ಹಗರಣದಲ್ಲಿ ಭ್ರಷ್ಟಾಚಾರ (Skill development scam) ಆರೋಪದ ಮೇಲೆ ನಾಯ್ಡು ಅವರನ್ನು ಸೆಪ್ಟೆಂಬರ್ 9ರಂದು ಬಂಧಿಸಲಾಗಿದ್ದು, ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ. ಕಾರಾಗೃಹದ ಸುತ್ತಲೂ ಬಿಗಿ ಭದ್ರತೆ ಒದಗಿಸಲಾಗಿದೆ.