ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸೈಬರ್ ಪ್ರಕರಣಗಳು ಹೆಚ್ಚಾಗುತ್ತಿವೆ. ಮ್ಯೂಲ್ ಅಕೌಂಟ್ ಮೂಲಕ ನಡೆಯುತ್ತಿದ್ದ ಭಾರೀ ಸೈಬರ್ ಸ್ಕ್ಯಾಮ್ ದಂಧೆಯನ್ನು ಸಿಐಡಿ ವಿಭಾಗ ಬೇಧಿಸಿದೆ.
ಏಕಕಾಲಕ್ಕೆ ನೂರಾರು ಕಡೆ ದಾಳಿ ನಡೆಸಿದ್ದ ಸಿಐಡಿ ತಂಡಗಳು, ಅಕ್ರಮಕ್ಕಾಗಿ ಬಳಸಲಾಗುತ್ತಿದ್ದ 40 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್‌ಗಳನ್ನ ಪತ್ತೆ ಹಚ್ಚಿದೆ. ರಾಜ್ಯದಲ್ಲಿ ರಾಜ್ಯಾದ್ಯಂತ 100ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ ಸಿಐಡಿ ತಂಡ, ಫೆಬ್ರವರಿ 6 ರಂದು ಈ ಪ್ರಕರಣದ ಪ್ರಮುಖ 13 ಮಾಸ್ಟರ್ ಮೈಂಡ್‌ಗಳನ್ನು ಬಂಧಿಸಿದೆ.
ಅಮಾಯಕ ಜನರ ಬ್ಯಾಂಕ್ ಖಾತೆ, ಎಟಿಎಂ ಕಾರ್ಡ್ ಹಾಗೂ ಖಾತೆ ವಿವರಗಳನ್ನ ಹಣಕ್ಕಾಗಿ ಸಂಗ್ರಹಿಸಿ ಸೈಬರ್ ವಂಚಕರಿಗೆ ನೀಡಲಾಗುತ್ತಿತ್ತು ಎಂಬುದು ಸಿಐಡಿ ತನಿಖೆ ವೇಳೆ ಬಯಲಾಗಿದೆ.
ಈ ಮ್ಯೂಲ್ ಅಕೌಂಟ್‌ಗಳ ಮೂಲಕ ಆನ್‌ಲೈನ್ ವಂಚನೆ ನಡೆಸಿ ಹಣ ವರ್ಗಾವಣೆ ಹಾಗೂ ಎಟಿಎಂ ಮೂಲಕ ಹಣ ವಿತ್‌ಡ್ರಾ ಮಾಡಲಾಗುತ್ತಿತ್ತು. ಖಾತೆ ವಿವರ ನೀಡಿದ ಅಮಾಯಕರಿಗೆ ಈ ವಂಚನೆಯ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ತಿಳಿದುಬಂದಿದೆ. ತನಿಖೆಯ ವೇಳೆ ಸುಮಾರು 40 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್‌ಗಳು ಬಳಕೆಯಲ್ಲಿರುವುದು ಪತ್ತೆಯಾಗಿದೆ.



