March 23, 2026
Monday, March 23, 2026
spot_img

ಮೂಡಬಿದಿರೆ ಮಹಿಳೆಯರ ಮೇಲಿನ ಪೊಲೀಸ್ ದೌರ್ಜನ್ಯ ಪ್ರಕರಣ ತನಿಖೆ ಸಿಐಡಿಗೆ: ಗೃಹ ಸಚಿವ ಡಾ. ಜಿ.ಪರಮೇಶ್ವರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ಮಹಿಳೆಯರ ಮೇಲೆ ಪೊಲೀಸ್ ಇನ್ಸ್‌ಪೆಕ್ಟರ್ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಗಳ ಗಂಭೀರತೆಯನ್ನು ಪರಿಗಣಿಸಿ ಪ್ರಕರಣವನ್ನು ಸಿಐಡಿ ಗೆ ವರ್ಗಾಹಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಇದಕ್ಕೂ ಮೊದಲು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಜೊತೆ ನಾಲ್ವರು ಸಂತ್ರಸ್ತರು ಗೃಹ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !