RERUITMENT | ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 35 ಸ್ಟಾಫ್‌ ನರ್ಸ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಬಿ.ಎಸ್ಸಿ, ಎಂ.ಎಸ್ಸಿ ವಿದ್ಯಾರ್ಹತೆ ಜೊತೆಗೆ ಗರಿಷ್ಟ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000 ವೇತನವನ್ನು ನೀಡಲಾಗುವುದು.

ಅರ್ಜಿದಾರರು 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಏಪ್ರಿಲ್‌ 10,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!