ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ಚಿತ್ರರಂಗದಲ್ಲಿ ಈಗ ರಣವೀರ್ ಸಿಂಗ್ ಅವರದ್ದೇ ಹವಾ. ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದ್ದು, ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತಿ ಹೆಚ್ಚು ಗಳಿಕೆ ಮಾಡಿದ ಹಿಂದಿ ಸಿನಿಮಾ ಎಂಬ ಐತಿಹಾಸಿಕ ದಾಖಲೆ ನಿರ್ಮಿಸಿದೆ.
ಇಲ್ಲಿಯವರೆಗೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ (ಹಿಂದಿ ವರ್ಷನ್) 830.10 ಕೋಟಿ ರೂಪಾಯಿ ಗಳಿಸುವ ಮೂಲಕ ಮೊದಲ ಸ್ಥಾನದಲ್ಲಿತ್ತು. ಆದರೆ, ‘ಧುರಂಧರ್’ ಸಿನಿಮಾ ಬಿಡುಗಡೆಯಾದ ಕೇವಲ 33 ದಿನಗಳಲ್ಲಿ ಭರ್ಜರಿ 831.40 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಈ ದಾಖಲೆಯನ್ನು ಅಳಿಸಿ ಹಾಕಿದೆ. ಪ್ರಖ್ಯಾತ ಟ್ರೇಡ್ ವಿಶ್ಲೇಷಕ ತರಣ್ ಆದರ್ಶ್ ಅವರು ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವನ್ನು ದೃಢಪಡಿಸಿದ್ದು, ‘ಹಿಂದಿ ಸಿನಿಮಾದ ಬ್ಯುಸಿನೆಸ್‌ನಲ್ಲಿ ಇದು ಐತಿಹಾಸಿಕ ಕ್ಷಣ, ಹೊಸ ಚಕ್ರವರ್ತಿಯ ಆಗಮನವಾಗಿದೆ’ ಎಂದು ಬಣ್ಣಿಸಿದ್ದಾರೆ.
‘ಬಾಲಿವುಡ್ ಹಂಗಾಮಾ’ ವರದಿಯ ಪ್ರಕಾರ, ಸಿನಿಮಾ ಇನ್ನೂ ಅನೇಕ ಕಡೆಗಳಲ್ಲಿ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಮುಂಬರುವ ವೀಕೆಂಡ್‌ನಲ್ಲಿ ಗಳಿಕೆಯ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ತೆರೆಕಂಡ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಸಿಗುತ್ತಿರುವ ಬೆಂಬಲ ಬಾಕ್ಸ್ ಆಫೀಸ್ ತಜ್ಞರನ್ನು ಅಚ್ಚರಿಗೊಳಿಸಿದೆ.

