ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಘವೇಂದ್ರ ರಾಜಕುಮಾರ್ ಅವರ ಪುತ್ರ ವಿನಯ್ ರಾಜ್ ಕುಮಾರ್ ಅವರು ತಮ್ಮ ಸಿನಿಮಾಗಳಲ್ಲಿ ಹೆಚ್ಚಾಗಿ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಾರೆ. ಇದೀಗ ಇಂಥದೆ ಒಂದು ಸಿನಿಮಾ ಒಂದು ಸರಳ ಪ್ರೇಮ ಕಥೆ ಚಿತ್ರದಲ್ಲಿ ಕ್ಯೂಟ್ ಲವರ್ ಬಾಯ್ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ ರಿಲೀಸ್ ಆಗಿದ್ದು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದೀಗ ಈ ಚಿತ್ರಕ್ಕೆ ಸ್ಯಾಂಡಲ್ವುಡ್ ನ ಮೋಹಕ ತಾರೆ ರಮ್ಯಾ ಮನಸೊತ್ತಿದ್ದಾರೆ. ಹೌದು, ಸಿಂಪಲ್ ಸುನಿ ಡೈರೆಕ್ಷನ್ ಹೇಳಿರುವ ಒಂದು ಸರಳ ಪ್ರೇಮ ಕಥೆ ಚಿತ್ರ ಪ್ರೇಕ್ಷಕರ ಮನ ಗೆದ್ದಿದೆ. ಇನ್ನು ನಟಿ ರಮ್ಯಾ ಕೂಡ ಈ ಸಿನಿಮಾಗೆ ಫಿಧಾ ಆಗಿದ್ದಾರೆ. ಚಿತ್ರವನ್ನು ವೀಕ್ಷಿಸಿರುವ ರಮ್ಯಾ ಅವರು ಬಹಳ ಮೆಚ್ಚುಗೆಯನ್ನು ಸಿನಿಮಾ ತಂಡಕ್ಕೆ ವ್ಯಕ್ತಪಡಿಸಿದ್ದಾರೆ. ಇದು ಒಂದು ಅದ್ಭುತ ಚಿತ್ರ, ಸ್ಕ್ರೀನ್ ಪ್ಲೇ ಬಹಳ ಚೆನ್ನಾಗಿ ಮೂಡಿಬಂದಿದೆ ಎಂದು ತಿಳಿಸಿದ್ದಾರೆ.
ಅಷ್ಟೇ ಅಲ್ಲದೇ ಈ ಸಿನಿಮಾದ ಕುರಿತು ರಮ್ಯಾ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ತಮ್ಮ ಮೆಚ್ಚುಗೆಯನ್ನು ಸಿನಿಮಾ ತಂಡಕ್ಕೆ ತಿಳಿಸಿದ್ದಾರೆ.