ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಕಿಚ್ಚ ಸುದೀಪ್ ಅಭಿನಯಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾ ಮಾರ್ಕ್. ಕಿಚ್ಚನ ಬರ್ತಡೇಗೆ ಟೈಟಲ್ ಟೀಸರ್ ರಿಲೀಸ್ ಮಾಡಲಾಗಿತ್ತು. ಅಜಯ್ ಮಾರ್ಕಂಡೆ ಎಂಬ ಪಾತ್ರದಲ್ಲಿ ಸುದೀಪ್ ಅವರು ನಟಿಸುತ್ತಿದ್ದಾರೆ. ಈ ಟೈಟಲ್ ಟೀಸರ್ ಇದೀಗ ಹೊಸ ದಾಖಲೆ ಬರೆದಿದೆ.
ಮಾರ್ಕ್ ಟೈಟಲ್ ಟೀಸರ್ ಯೂಟ್ಯೂಬ್ ನಲ್ಲಿ 5.01 ಮಿಲಿಯನ್ ವೀವ್ಸ್ ಕಂಡಿದೆ. ಇನ್‌ಸ್ಟಾಗ್ರಾಂನಲ್ಲಿ 4.3 ಮಿಲಿಯನ್ ವೀಕ್ಷಣೆ ಕಂಡಿದೆ. ಯೂಟ್ಯೂಬ್ ಹಾಗೂ ಇನ್‌ಸ್ಟಾ ಒಟ್ಟಾರೆ ಸೇರಿ ಮಾರ್ಕ್ ಟೈಟಲ್ ಟೀಸರ್ 9.3 ಮಿಲಿಯನ್ ವೀವ್ಸ್ ಕಂಡಿದೆ.
‘ಸತ್ಯಜ್ಯೋತಿ ಫಿಲ್ಮ್ಸ್’ ಮತ್ತು ‘ಕಿಚ್ಚ ಕ್ರಿಯೇಷನ್ಸ್’ ಬ್ಯಾನರ್‌ಗಳು ಜೊತೆಯಾಗಿ ಈ ಸಿನಿಮಾವನ್ನು ನಿರ್ಮಿಸುತ್ತಿವೆ. ಈ ಮೊದಲು ‘ಮ್ಯಾಕ್ಸ್’ ಸಿನಿಮಾದ ಮೂಲಕ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರು ಬ್ಲಾಕ್ ಬಸ್ಟರ್ ಹಿಟ್ ನೀಡಿದ್ದರು. ಈಗ ‘ಮಾರ್ಕ್’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಸುದೀಪ್ ಮತ್ತು ವಿಜಯ್ ಕಾರ್ತಿಕೇಯ ಅವರ ಕಾಂಬಿನೇಷನ್‌ನಲ್ಲಿ ಬರುತ್ತಿರುವ ಎರಡನೇ ಸಿನಿಮಾ ಇದಾಗಿದೆ.