ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲ ವಾರಗಳಿಂದ ನಟ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದ ಬಗ್ಗೆ ಯಾವುದೇ ಅಪ್ಡೇಟ್ ಹೊರಬಿದ್ದಿಲ್ಲ. ಇದೀಗ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ.
ಎರಡು ಭಿನ್ನ ದಿನಾಂಕಗಳಲ್ಲಿ ಸಿನಿಮಾದ ಟೀಸರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಲಾಗಿದೆ. ಇದಕ್ಕಾಗಿ ವಿಶೇಷ ಕಾರ್ಯಕ್ರಮಗಳನ್ನು ಎರಡು ಪ್ರತ್ಯೇಕ ನಗರಗಳಲ್ಲಿ ಹಮ್ಮಿಕೊಳ್ಳಲಾಗಿದೆ.
‘ಕೆಡಿ’ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಸಿನಿಮಾದ ಟೀಸರ್ ಜುಲೈ 10 ರಂದು ಮುಂಬೈನಲ್ಲಿ ಬಿಡುಗಡೆ ಆಗಲಿದೆ. ಮುಂಬೈನಲ್ಲಿ ಇದಕ್ಕಾಗಿ ವಿಶೇಷ ಕಾರ್ಯಕ್ರಮವನ್ನು ಚಿತ್ರತಂಡ ಆಯೋಜನೆ ಮಾಡಿದೆ.
ಇನ್ನು ಜುಲೈ 12 ರಂದು ಬೆಂಗಳೂರಿನಲ್ಲಿ ‘ಕೆಡಿ’ ಸಿನಿಮಾದ ಟೀಸರ್ ಬಿಡುಗಡೆ ಆಗಲಿದೆ. ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ವಿಶೇಷವಾಗಿ ಕನ್ನಡ ಟೀಸರ್ ಬಿಡುಗಡೆ ಆಗಲಿದೆ.