ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ ವುಡ್ ನಟಿ ರಾಗಿಣಿ ತಮ್ಮ ಶೂಟಿಂಗ್ ವೇಳೆ ಕಾಲಿಗೆ ಗಾಯ ಮಾಡಿಕೊಂಡಿದ್ದು ಇದೀಗ ಅವರ ಕಾಲಿಗೆ ಪೆಟ್ಟಾದ ಫೋಟೋ ವೈರಲ್ ಆಗಿದೆ. ಅಷ್ಟು ನೋವಲ್ಲು ರಾಗಿಣಿ ನಗು ನಗುತ್ತಾ ಇರುವುದು ಫೋಟೋದಲ್ಲಿ ಕ್ಯಾಪ್ಚರ್ ಆಗಿದೆ.
ಸದ್ಯ ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದು, ರಾಗಿಣಿ ಒಂದು ವಾರ ವಿಶ್ರಾಂತಿ ತೆಗೆದುಕೊಳ್ಳಬೇಕು ಎಂದಿದ್ದಾರೆ.
ಬೆಂಗಳೂರಿನ ಸ್ಟುಡಿಯೋದಲ್ಲಿ ಮದನಿಕ ಎಂಬ ಚಿತ್ರದ ಚಿತ್ರೀಕರಣ ನಡೆಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಈ ಚಿತ್ರದಲ್ಲಿ ರಾಗಿಣಿ ದ್ವಿವೇದಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಮದನಿಕ ಚಿತ್ರ ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ತಯಾರಾಗಲಿದ್ದು. ಬೆಂಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ. ರಾಗಿಣಿ ಪಾತ್ರದ ಚಿತ್ರೀಕರಣವನ್ನು ಮುಂದೂಡಲಾಗಿದೆ ಎಂದು ಚಿತ್ರ ತಂಡ ತಿಳಿಸಿದೆ.