May 23, 2026
Saturday, May 23, 2026
spot_img

CINE | ಮತ್ತೊಮ್ಮೆ ತೆರೆಗೆ ಬರಲು ರೆಡಿಯಾದ ಆಂಧ್ರ DCM: ‘ಉಸ್ತಾದ್ ಭಗತ್ ಸಿಂಗ್’ ರಿಲೀಸ್ ಡೇಟ್ ಫಿಕ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಕ್ರಿಯ ರಾಜಕೀಯದಲ್ಲಿದ್ದರೂ ಪವರ್‌ಸ್ಟಾರ್ ಪವನ್ ಕಲ್ಯಾಣ್ ಅವರ ಸಿನಿಮಾ ಪಯಣ ಇನ್ನೂ ನಿಂತಿಲ್ಲ ಎಂಬುದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಿದೆ. ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಹುದ್ದೆ ಹೊತ್ತ ಬಳಿಕವೂ ಅವರ ನಟನೆಯ ಚಿತ್ರಗಳು ಒಂದರ ನಂತರ ಒಂದಾಗಿ ತೆರೆಗೆ ಬರುತ್ತಿವೆ. ಇದೀಗ ಪವನ್ ಅಭಿನಯದ ಹೊಸ ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಪ್ರಕಟಿಸಿದೆ.

ಡಿಸಿಎಂ ಆಗಿದ ನಂತರ ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಚಿತ್ರ ಸಾಧಾರಣ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಬಳಿಕ ಬಿಡುಗಡೆಯಾದ ‘ಓಜಿ’ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿತು. ಇದೀಗ ಅದೇ ಹಾದಿಯಲ್ಲಿ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 23ರಂದು ಪ್ರೇಕ್ಷಕರ ಮುಂದೆ ಬರಲಿದೆ ಎಂದು ನಿರ್ದೇಶಕ ಹರೀಶ್ ಶಂಕರ್ ಹೇಳಿದ್ದಾರೆ.

ಇದನ್ನೂ ಓದಿ:

ಈ ಸಿನಿಮಾದಲ್ಲಿ ಪವನ್ ಕಲ್ಯಾಣ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ನಾಯಕಿಯಾಗಿ ಕನ್ನಡ ನಟಿ ಶ್ರೀಲೀಲಾ ಅಭಿನಯಿಸಿದ್ದಾರೆ. ‘ಗಬ್ಬರ್ ಸಿಂಗ್’ ಚಿತ್ರದ ಪಾತ್ರದಿಂದ ಪ್ರೇರಣೆ ಪಡೆದು ಈ ಚಿತ್ರಕ್ಕೆ ಕಥಾರೂಪ ನೀಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !