CINE | ಅಪ್ಪು ‘ಜಾಕಿ’ ಸಿನಿಮಾ ರಿ ರಿಲೀಸ್: ಬಹುತೇಕ ಚಿತ್ರಮಂದಿರ ಹೌಸ್ ಫುಲ್​

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾರ್ಚ್ 17 ದಿವಂಗತ ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬ. ಅವರ ಹುಟ್ಟುಹಬ್ಬವನ್ನು ನೆನಪಿಸುವ ನಿಟ್ಟಿನಲ್ಲಿ ಇಂದು ‘ಜಾಕಿ’ ಚಿತ್ರವನ್ನು ಮರು ಬಿಡುಗಡೆ ಮಾಡಲಾಗಿದೆ.

ಬೆಳಗ್ಗೆ 4.30ರಿಂದ ಪ್ರಸನ್ನ ಥಿಯೇಟರ್ ನಲ್ಲಿ ಜಾಕಿ ಚಿತ್ರ ಪ್ರದರ್ಶನಗೊಂಡಿದೆ. ಇಡೀ ಥಿಯೇಟರ್ ಜನರಿಂದ ತುಂಬಿ ತುಳುಕುತ್ತಿದ್ದು ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಾಕಿ ಮರು ಬಿಡುಗಡೆಯನ್ನು ಅಪ್ಪು ಅಭಿಮಾನಿಗಳು ಕೂಡ ಹಬ್ಬದಂತೆ ಆಚರಿಸುತ್ತಿದ್ದಾರೆ.

ಬಹುತೇಕ ಚಿತ್ರಮಂದಿರಗಳಲ್ಲಿ ಶೋ ಹೌಸ್ ಫುಲ್ ಆಗಿದೆ. ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ “ಜಾಕಿ” ಪ್ರದರ್ಶನಗೊಂಡಿದ್ದು. ಅಪ್ಪು ಹುಟ್ಟುಹಬ್ಬದ ಸಂದರ್ಭದಲ್ಲಿ ಜಾಕಿ ಚಿತ್ರವನ್ನು ಮರು ಬಿಡುಗಡೆ ಮಾಡಲಾಗಿದೆ.

ಜಾಕಿ 2010 ರಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು ಮತ್ತು ಚಿತ್ರರಂಗದಲ್ಲಿ ದೊಡ್ಡ ಯಶಸ್ಸನ್ನು ಕಂಡಿತ್ತು. ಈ ಚಿತ್ರದಲ್ಲಿ ನಟಿ ಭಾವನಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!