ಹೊಸದಿಗಂತ ಡಿಜಿಟಲ್ ಡೆಸ್ಕ್:
ದೀಪಿಕಾ ಪಡುಕೋಣೆ ಮತ್ತೊಮ್ಮೆ ಅಟ್ಲೀ ಜೊತೆ ಕೈಜೋಡಿಸಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ಅಟ್ಲಿ, ತಮ್ಮ ಮುಂದಿನ ಪ್ಯಾನ್-ಇಂಡಿಯಾ ಚಿತ್ರಕ್ಕೆ ಬಾಲಿವುಡ್ನ ‘ಕ್ವೀನ್’ ದೀಪಿಕಾ ಪಡುಕೋಣೆ ಮತ್ತು ಟಾಲಿವುಡ್ನ ‘ಐಕಾನ್ ಸ್ಟಾರ್’ ಅಲ್ಲು ಅರ್ಜುನ್ ಅವರನ್ನು ಒಂದಾಗಿಸಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.
ಕೆಲ ದಿನಗಳ ಹಿಂದೆಯಷ್ಟೇ, ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರ ‘ಸ್ಪಿರಿಟ್’ ಚಿತ್ರದಲ್ಲಿ ಪ್ರಭಾಸ್ ಜೊತೆ ನಟಿಸಲು ದೀಪಿಕಾ ಪಡುಕೋಣೆ ಅವರನ್ನು ಸಂಪರ್ಕಿಸಲಾಗಿತ್ತು. ಆದರೆ ದೀಪಿಕಾ ಇಟ್ಟಿದ್ದ ಕೆಲವು ಬೇಡಿಕೆಗಳು ನಿರ್ದೇಶಕ ವಂಗಾ ಅವರಿಗೆ ಇಷ್ಟವಾಗಲಿಲ್ಲ ಎಂದು ವರದಿಗಳು ಹೇಳಿವೆ.
ಅಟ್ಲೀ ಅವರ ಈ ಚಿತ್ರದಲ್ಲಿ ದೀಪಿಕಾ ಅವರ ಪಾತ್ರ ಕೇವಲ ಹಾಡು, ನೃತ್ಯಕ್ಕೆ ಸೀಮಿತವಾಗಿರುವುದಿಲ್ಲ. ಬದಲಿಗೆ, ಕಥೆಯ ಕೇಂದ್ರಬಿಂದುವಾಗಿರುವ, ನಾಯಕನಷ್ಟೇ ಪ್ರಾಮುಖ್ಯತೆ ಹೊಂದಿರುವ ಅತ್ಯಂತ ಬಲವಾದ ಮತ್ತು ನಿರ್ಣಾಯಕ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಇನ್ನಷ್ಟೇ ಹೊರಬೀಳಬೇಕಾಗಿದ್ದರೂ, ಈ ಸುದ್ದಿ ಈಗಾಗಲೇ ಭಾರತೀಯ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆಗಳನ್ನು ಹುಟ್ಟುಹಾಕಿವೆ.