CINE | ಸದ್ದಿಲ್ಲದೆ ಹಸೆಮಣೆ ಏರಲು ಸಜ್ಜಾದ “ರಣವಿಕ್ರಮ”ನ ಬೆಡಗಿ: ಮದುವೆ ಯಾವಾಗ?

ಹೊಸದಿಗಂತ ಡಿಜಿಟಲ್ ಡೆಸ್ಕ್:

 

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆ ರಣವಿಕ್ರಮ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಟಿ ಅಂಜಲಿ ಅವರ ಮದುವೆ ಸುದ್ದಿ ಕೇಳಿಬರುತ್ತಿದೆ. ಅಂಜಲಿ ಕನ್ನಡ ಜೊತೆಗೆ ತಮಿಳು ಮತ್ತು ತೆಲುಗು ಚಿತ್ರಗಳಲ್ಲಿ ನಟಿಸಿದ್ದಾರೆ. ಪುನೀತ್ ರಾಜ್‌ಕುಮಾರ್ ಅವರ ರಣವಿಕ್ರಮ ಮತ್ತು ಶಿವರಾಜ್‌ಕುಮಾರ್ ಅವರ ಬೈರಾಗಿ ಚಿತ್ರದಲ್ಲಿನ ಪಾತ್ರಗಳಿಂದಾಗಿ ನಟಿ ಅಂಜಲಿ ಕನ್ನಡಿಗರಿಗೆ ಪರಿಚಿತರು.

ಮೂಲಗಳ ಪ್ರಕಾರ, ನಟಿ ಅಂಜಲಿ ತೆಲುಗು ನಿರ್ಮಾಪಕರೊಬ್ಬರನ್ನು ಪ್ರೀತಿಸುತ್ತಿದ್ದು, ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ವರದಿಗಳಿವೆ. ನಟಿ ಅಂಜಲಿ ಮದುವೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆದಿದೆ. ಆ ಪ್ರೀತಿಯ ಹುಡುಗ ಯಾರು ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಆದರೆ ನಟಿ ಅಂಜಲಿ ಈ ಬಗ್ಗೆ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸದ್ಯ ಈ ನಟಿ ತಮಿಳು ಮತ್ತು ತೆಲುಗು ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!