ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ಅಂಗಳದಲ್ಲಿ ಮದುವೆಯ ಸಂಭ್ರಮ ಮನೆ ಮಾಡಿದೆ. ಇದೀಗ ಬಾಲಿವುಡ್ ನಟಿ ತಾಪ್ಸಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ತಮ್ಮ ಬಹುಕಾಲದ ಗೆಳೆಯನನ್ನು ಮದುವೆಯಾಗಲು ತಾಪ್ಸಿ ಸಿದ್ಧರಾಗಿದ್ದಾರೆ. ಮಾರ್ಚ್ ಅಂತ್ಯದಲ್ಲಿ ಉದಯಪುರದಲ್ಲಿ ಮದುವೆ ನಡೆಯಲಿದೆ ಎನ್ನಲಾಗಿದೆ.
ತಾಪ್ಸಿ ಬ್ಯಾಡ್ಮಿಂಟನ್ ಆಟಗಾರ ಮಥಿಯಾಸ್ ಬೋ ಅವರೊಂದಿಗೆ 10 ವರ್ಷಗಳ ಕಾಲ ಸಂಬಂಧ ಹೊಂದಿದ್ದರು. ಈಗ ಗುರುಹಿರಿಯರ ಒಪ್ಪಿಗೆ ಪಡೆದು ಮದುವೆಯಾಗಳಿದ್ದಾರೆ. ಮದುವೆಯಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತರು ಮಾತ್ರ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.