ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಆದರೆ ಫ್ಯಾನ್ಸ್ ಜೊತೆ ಸೆಲೆಬ್ರೇಟ್ ಮಾಡುತ್ತಿಲ್ಲ. ಅದಕ್ಕೆ ಅನಾರೋಗ್ಯ ಕಾರಣ. ಹಾಗಂತ ಅಭಿಮಾನಿಗಳ ವಲಯದಲ್ಲಿ ಸಡಗರ ಕಮ್ಮಿ ಆಗಿಲ್ಲ. ಆ ಸಂಭ್ರಮವನ್ನು ಜಾಸ್ತಿ ಮಾಡಲು ‘ದಿ ಡೆವಿಲ್’ ಸಿನಿಮಾದ ಟೀಸರ್ ರಿಲೀಸ್ ಆಗಿದೆ.
ಮಿಲನ ಪ್ರಕಾಶ್ ಅವರು ನಿರ್ದೇಶನ ಮಾಡುತ್ತಿರುವ ಈ ಸಿನಿಮಾ ಟೀಸರ್ ಮೂಲಕ ನಿರೀಕ್ಷೆಯನ್ನು ಡಬಲ್ ಮಾಡಲಾಗಿದೆ. ದರ್ಶನ್ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆ ಆಗಿರುವ ಈ ಟೀಸರ್ ಇದೀಗ ವೈರಲ್ ಆಗುತ್ತಿದೆ.
‘ದಿ ಡೆವಿಲ್’ ಸಿನಿಮಾದ ಚಿತ್ರೀಕರಣಕ್ಕೆ ಬ್ರೇಕ್ ಹಾಕಲಾಗಿತ್ತು. ಚಿತ್ರತಂಡದಿಂದ ಯಾವುದೇ ಅಪ್ಡೇಟ್ ಕೂಡ ಸಿಕ್ಕಿರಲಿಲ್ಲ. ಈಗ ಟೀಸರ್ ನೋಡಿ ಫ್ಯಾನ್ಸ್ ಫುಲ್ ಖುಷಿಪಟ್ಟಿದ್ದಾರೆ.