August 12, 2026
Wednesday, August 12, 2026
spot_img

CINE | ‘ಜನ ನಾಯಗನ್’ ಸಿನಿಮಾ ರಿಲೀಸ್‌ಗೆ ಕೌಂಟ್‌ಡೌನ್ ಶುರು: ಥಿಯೇಟರ್‌ಗಳಿಗೆ ಹೊಸ ರೂಲ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾ ಜುಲೈ 23ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಚಿತ್ರಮಂದಿರಗಳಿಗೆ ಆಗಮಿಸುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ನಿರ್ಮಾಪಕರು ಥಿಯೇಟರ್‌ಗಳಿಗೆ ಕೆಲವು ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ.

ಟಿಕೆಟ್ ದರದಲ್ಲಿ ಏರಿಕೆ ಇಲ್ಲ

ತಮಿಳುನಾಡಿನಲ್ಲಿ ಸುಮಾರು 950 ಪರದೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದ್ದು, ಸರ್ಕಾರ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ ಟಿಕೆಟ್ ದರ ವಸೂಲಿ ಮಾಡಬಾರದು ಎಂದು ನಿರ್ಮಾಪಕರು ಸ್ಪಷ್ಟಪಡಿಸಿದ್ದಾರೆ. ಹೆಚ್ಚುವರಿ ದರಕ್ಕೆ ಯಾವುದೇ ಅನುಮತಿ ಪಡೆಯಲಾಗಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:

ಚಿತ್ರಮಂದಿರಗಳಿಗೆ ಕಟ್ಟುನಿಟ್ಟಿನ ಸೂಚನೆ

ಸಿನಿಮಾಗೆ ‘A’ ಪ್ರಮಾಣಪತ್ರ ದೊರೆತಿರುವುದರಿಂದ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಟಿಕೆಟ್ ನೀಡದಂತೆ ಸೂಚಿಸಲಾಗಿದೆ. ಜೊತೆಗೆ ಬಿಡುಗಡೆಯ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುವಂತೆ ವಿತರಕರು ಹಾಗೂ ಥಿಯೇಟರ್ ಮಾಲೀಕರಿಗೆ ಮನವಿ ಮಾಡಲಾಗಿದೆ.

ಬಿಡುಗಡೆಗೆ ಕೌಂಟ್‌ಡೌನ್

ಆರಂಭದಲ್ಲಿ ಬಿಡುಗಡೆಯಲ್ಲಿ ವಿಳಂಬವಾದ ಈ ಚಿತ್ರ ಇದೀಗ ಜುಲೈ 23ರಂದು ಪ್ರೇಕ್ಷಕರ ಮುಂದೆ ಬರಲಿದೆ. ಎಚ್. ವಿನೋದ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ಪೂಜಾ ಹೆಗ್ಡೆ ಮತ್ತು ಮಮಿತಾ ಬೈಜು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಅನಿರುದ್ಧ್ ಸಂಗೀತ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !