CINE | ಮೊದಲ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ ದಂಪತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಖ್ಯಾತ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಗರ್ಭಿಣಿಯಾಗಿದ್ದಾರೆ ಎಂದು ಹೇಳಲಾಗಿದೆ. ವರದಿಯ ಪ್ರಕಾರ, ದೀಪಿಕಾ ಪ್ರಸ್ತುತ ಗರ್ಭಧಾರಣೆಯ ಎರಡನೇ ತ್ರೈಮಾಸಿಕದಲ್ಲಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ದೀಪಿಕಾ ಅಥವಾ ಅವರ ಪತಿ ಖ್ಯಾತ ನಟ ರಣವೀರ್ ಸಿಂಗ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಕುತೂಹಲಕಾರಿಯಾಗಿ, ವೈಟ್ ಲೋಟಸ್‌ನ ಮೂರನೇ ಸೀಸನ್‌ನಿಂದ ದೀಪಿಕಾ ಹೊರ ಉಳಿದಿದ್ದಾರೆ ಎಂದು ವರದಿಯಾದ ಕೆಲವು ದಿನಗಳ ನಂತರ ದೀಪಿಕಾ ಗರ್ಭಧಾರಣೆಯ ಸುದ್ದಿ ಕೇಳಿ ಬಂದಿದೆ. HOB ನ ಅತ್ಯಂತ ಜನಪ್ರಿಯ ಕಾರ್ಯಕ್ರಮವಾದ ದಿ ವೈಟ್ ಲೋಟಸ್‌ನ ಮೂರನೇ ಸೀಸನ್‌ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ ಎಂಬ ವರದಿಗಳಿವೆ. ಆದರೆ, ವಾರಾಂತ್ಯದಲ್ಲಿ ದೀಪಿಕಾ ಕಾರ್ಯಕ್ರಮದಿಂದ ನಿರ್ಗಮಿಸಿದ್ದಾರೆ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!