March 7, 2026
Saturday, March 7, 2026
spot_img

CINE | ಯಶ್ ಫ್ಯಾನ್ಸ್ ಗೆ ಡಬಲ್ ಖುಷಿ: ‘ಟಾಕ್ಸಿಕ್’ ರಿಲೀಸ್ ಜೊತೆ ಮತ್ತೊಂದು ಧಮಾಕ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸದ್ಯ ಚಿತ್ರರಂಗದಲ್ಲಿ ಬಹು ನಿರೀಕ್ಷೆಯಲ್ಲಿರುವ ಸುದ್ದಿಯೊಂದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ನಟ ಯಶ್ ಅಭಿನಯಿಸುತ್ತಿರುವ ರಾಮಾಯಣ ಚಿತ್ರದ ಪ್ರಮುಖ ಪಾತ್ರಗಳನ್ನು ಮಾರ್ಚ್ 26ರಂದು ಅಧಿಕೃತವಾಗಿ ಪರಿಚಯಿಸಲು ಯೋಜನೆ ರೂಪಿಸಲಾಗಿದೆ ಎಂಬ ಮಾಹಿತಿ ಹೊರಬಂದಿದೆ.

ಮಾರ್ಚ್ 19ರಂದು ಬಿಡುಗಡೆಯಾಗಲಿರುವ ಮತ್ತೊಂದು ಚಿತ್ರದ ಸಂಭ್ರಮದ ನಂತರ, ಕೇವಲ 1 ವಾರದಲ್ಲೇ ಈ ವಿಶೇಷ ಕಾರ್ಯಕ್ರಮ ನಡೆಯಲಿರುವುದರಿಂದ ಅಭಿಮಾನಿಗಳಲ್ಲಿ ಮತ್ತಷ್ಟು ಉತ್ಸಾಹ ಹೆಚ್ಚಾಗಿದೆ.

ಇದನ್ನೂ ಓದಿ:

ಮಾರ್ಚ್ 26ರಂದು ನಡೆಯುವ ರಾಮನವಮಿ ಹಬ್ಬದ ಹಿನ್ನೆಲೆ ಈ ದಿನವನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗುತ್ತಿದೆ. ನಿರ್ಮಾಪಕ ನಮಿತ್ ಮಲ್ಹೋತ್ರಾ ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲು ತೀರ್ಮಾನಿಸಿದ್ದು, ಮುಂಬೈಯ ಗೇಟ್ ವೇ ಆಫ್ ಇಂಡಿಯಾ ಸ್ಥಳದಲ್ಲಿ ವೇದಿಕೆ ಸಿದ್ಧವಾಗುತ್ತಿದೆ. ರಾಜಕೀಯ, ಕ್ರೀಡೆ ಮತ್ತು ಚಿತ್ರರಂಗದ ಅನೇಕ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸುವ ಸಾಧ್ಯತೆ ಕೂಡ ಇದೆ ಎಂದು ಮೂಲಗಳು ಹೇಳಿವೆ.

ಈ ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ, ಸನ್ನಿ ಡಿಯೋಲ್ ಹನುಮಂತನಾಗಿ ಕಾಣಿಸಿಕೊಳ್ಳಲಿದ್ದಾರೆ. ರಾವಣನ ಪಾತ್ರದಲ್ಲಿ ಯಶ್ ನಟಿಸುತ್ತಿದ್ದು, ನಿರ್ದೇಶಕ ನಿತೇಶ್ ತಿವಾರಿ ಈ ಮಹತ್ವಾಕಾಂಕ್ಷಿ ಚಿತ್ರವನ್ನು ರೂಪಿಸುತ್ತಿದ್ದಾರೆ. ಒಂದೇ ವಾರದಲ್ಲಿ 2 ದೊಡ್ಡ ಸಂಭ್ರಮ ಎದುರಾಗುತ್ತಿರುವುದರಿಂದ ಅಭಿಮಾನಿಗಳಿಗೆ ಇದು ವಿಶೇಷ ಕ್ಷಣವಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !