ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಲಿವುಡ್‌ನ ನಟ ವಿಜಯ್ ದಳಪತಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 51ನೇ ವಸಂತಕ್ಕೆ ಕಾಲಿಟ್ಟಿರುವ ನಟ ವಿಜಯ್ ದಳಪತಿ ತಮ್ಮ ಕೊನೆಯ ಸಿನಿಮಾ ʻಜನ ನಾಯಗನ್ʼ ಫಸ್ಟ್ ಲುಕ್ ಟೀಸರ್ ರಿಲೀಸ್ ಆಗಿದೆ. ವಿಜಯ್ ದಳಪತಿ ಖಾಕಿ ತೊಟ್ಟು ಕೊಡುವ ಎಂಟ್ರಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ವಿಜಯ್ ದಳಪತಿ ಜನ ನಾಯಗನ್ ಸಿನಿಮಾ ಮೂಲಕ ತಮ್ಮ ಸಿನಿಮಾ ಕೆರಿಯರ್‌ಗೆ ಬ್ರೇಕ್ ತೆಗೆದುಕೊಳ್ತಿದ್ದಾರೆ. ನಂತರ ರಾಜಕೀಯದಲ್ಲೇ ತಮ್ಮನ್ನ ತೊಡಗಿಸಿಕೊಳ್ಳಲು ನಿರ್ಧಾರ ಮಾಡಿದ್ದಾರೆ. 2026ರ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.
ಜನ ನಾಯಗನ್ ಸಿನಿಮಾಗೆ ಎಚ್.ವಿನೋದ್ ನಿರ್ದೇಶನ ಮಾಡಿದ್ದಾರೆ. ವಿಜಯ್ ದಳಪತಿಗೆ ನಾಯಕಿಯಾಗಿ ಪೂಜಾ ಹೆಗ್ಡೆ ತೆರೆಹಂಚಿಕೊಂಡಿದ್ದಾರೆ.