ಹೊಸದಿಗಂತ ಡಿಜಿಟಲ್ ಡೆಸ್ಕ್:
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಪುತ್ರಿ ನಿರ್ಮಾಣ ಮಾಡಿರುವ ಫೈರ್ ಫ್ಲೈ ಸಿನಿಮಾ ಒಟಿಟಿಗೆ ಎಂಟ್ರಿ ಕೊಟ್ಟಿದೆ. ಒಂದೊಳ್ಳೆ ಕಾಡುವ ಕಥೆಯೊಂದಿಗೆ ಫೈರ್ ಫೈ ಸಿನಿಮಾ ಏಪ್ರಿಲ್ 24ಕ್ಕೆ ತೆರೆಗೆ ಬಂದಿತ್ತು.
ಈ ಸಿನಿಮಾದಲ್ಲಿ ವಂಶಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ನಟನೆಯೊಂದಿಗೆ ನಿರ್ದೇಶಕನ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ. ಚಿತ್ರದಲ್ಲಿ ರಚನಾ ಇಂದರ್ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಅಚ್ಯುತ್ ಕುಮಾರ್, ಸುಧಾರಾಣಿ, ಶೀತಲ್ ಶೆಟ್ಟಿ, ಆನಂದ್ ನೀನಾಸಂ, ಚಿತ್ಕಲಾ ಬಿರಾದಾರ್ ಮತ್ತು ಮೂಗು ಸುರೇಶ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಜೊತೆಗೆ ಅಭಿಲಾಷ್ ಕಳತ್ತಿ ಛಾಯಾಗ್ರಹಣ ಹಾಗೂ ಚರಣ್ ರಾಜ್ ಸಂಗೀತ ‘ಫೈರ್ ಫ್ಲೈ’ ಚಿತ್ರಕ್ಕಿದೆ.
ವಿಶೇಷ ಎಂದರೆ ಈ ಸಿನಿಮಾದಲ್ಲಿ ಶಿವಣ್ಣ ದಿ ಕಿಂಗ್ಸ್ ಪಿಜ್ಜಾ ಬಾಯ್ ಆಗಿ ನಟಿಸಿದ್ದಾರೆ. ಅಮೆಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಕೋಮಾಗೆ ಜಾರುವ ನಾಯಕ ಬಳಿಕ ಖಿನ್ನನಾಗಿ ನಿದ್ರಾಹೀನತೆಯಿಂದ ಬಳಲುತ್ತಾನೆ. ಮುಂದೆ ಏನಾಗುತ್ತದೆ? ಎನ್ನುವುದು ಇನ್ನುಳಿದ ಕಥೆ.