CINE | ಫ್ಯಾನ್ಸ್ ಗಳಿಗೆ ಮನರಂಜನೆ ನೀಡಲು ಬರುತ್ತಿದ್ದಾನೆ ‘GOAT’: ಹೊಸ ಗೆಟಪ್​ನಲ್ಲಿ ‘ದಳಪತಿ’ ಗ್ರಾಂಡ್ ಎಂಟ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಲಿವುಡ್ ನಟ ದಳಪತಿ ವಿಜಯ್ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರು ಪ್ರಸ್ತುತ ‘GOAT’ ಚಿತ್ರದ ಚಿತ್ರೀಕರಣದಲ್ಲಿದ್ದಾರೆ. “ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಎಂಬುದು ಚಿತ್ರದ ಶೀರ್ಷಿಕೆಯ ವಿಸ್ತರಣೆಯಾಗಿದೆ.

ನಾನಾ ಕಾರಣಗಳಿಗಾಗಿ ಅಭಿಮಾನಿಗಳು ಈ ಚಿತ್ರಕ್ಕಾಗಿ ಕಾಯುತ್ತಿದ್ದಾರೆ. ಈದ್ ಹಬ್ಬದ ಸಂದರ್ಭದಲ್ಲಿ ಇಂದು “GOAT” ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದ್ದು. ಹೊಸ ಪೋಸ್ಟರ್ ಬಿಡುಗಡೆಯಾಗಿದೆ.

ಈ ವರ್ಷ ಸೆಪ್ಟೆಂಬರ್ 14 ರಂದು “GOAT” ಚಿತ್ರ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ನಿರ್ಮಾಣ ಸಂಸ್ಥೆ ‘ಎಜಿಎಸ್ ಎಂಟರ್‌ಟೈನ್‌ಮೆಂಟ್’ನ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹೊಸ ಪೋಸ್ಟರ್ ಬಿಡುಗಡೆಯಾಗಿದ್ದು, ಚಿತ್ರದ ಬಿಡುಗಡೆ ದಿನಾಂಕದ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ವೆಂಕಟ್ ಪ್ರಭು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು. ದಳಪತಿ ವಿಜಯ್ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಥ್ರಿಲ್ಲರ್​ ಸಿನಿಮಾದಲ್ಲಿ ವಯಸ್ಸಾದ ವ್ಯಕ್ತಿಯ ಪಾತ್ರವನ್ನು ವಿಜಯ್​ ಮಾಡುತ್ತಿದ್ದಾರೆ. ಅವರ ಜೊತೆ ಪ್ರಭುದೇವ, ಮೀನಾಕ್ಷಿ ಚೌಧರಿ, ಪ್ರಶಾಂತ್​, ಜಯರಾಂ, ಸ್ನೇಹಾ, ಯೋಗಿ ಬಾಬು ಮುಂತಾದ ಕಲಾವಿದರು ಅಭಿನಯಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!