ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಸಿನಿಪ್ರೇಕ್ಷಕರ ನೆಚ್ಚಿನ ನಟ ‘ಗೋಲ್ಡನ್ ಸ್ಟಾರ್’ ಗಣೇಶ್ ಇಂದು (ಜುಲೈ 2) ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ತಮ್ಮ ಜನ್ಮದಿನದ ಅಂಗವಾಗಿ ಅವರು ತಿರುಪತಿ ವೆಂಕಟೇಶ್ವರ ಸ್ವಾಮಿಯ ಸನ್ನಿಧಿಗೆ ಭೇಟಿ ನೀಡಿದ್ದಾರೆ. ದೇವಸ್ಥಾನದಲ್ಲಿ ನಡೆದ ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡ ಗಣೇಶ್, ದೇವರ ದರ್ಶನ ಪಡೆದಿದ್ದಾರೆ.
ಸಾಂಪ್ರದಾಯಿಕ ಉಡುಪಿನಲ್ಲಿ ಗಣೇಶ್ ಕುಟುಂಬ
ಗಣೇಶ್ ಬಿಳಿ ಪಂಚೆ ಮತ್ತು ಶಲ್ಯ ಧರಿಸಿ ಅತ್ಯಂತ ಸಾಂಪ್ರದಾಯಿಕ ಶೈಲಿಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಅಭಿಮಾನಿಗಳ ಗಮನ ಸೆಳೆದಿದೆ.ಈ ಆಧ್ಯಾತ್ಮಿಕ ಭೇಟಿಯ ಸಂದರ್ಭದಲ್ಲಿ ಅವರ ಪತ್ನಿ ಶಿಲ್ಪಾ ಗಣೇಶ್ ಹಾಗೂ ಕುಟುಂಬದ ಆಪ್ತರು ಜೊತೆಯಲ್ಲಿದ್ದರು. ದೇವಸ್ಥಾನದ ಆವರಣದಲ್ಲಿ ಗೋಲ್ಡನ್ ಸ್ಟಾರ್‌ರನ್ನು ಗುರುತಿಸಿದ ಸಾರ್ವಜನಿಕರು ಮತ್ತು ಅಭಿಮಾನಿಗಳು ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಜನ್ಮದಿನದ ಶುಭಾಶಯಗಳನ್ನು ಕೋರಿದರು.
ಇದನ್ನೂ ಓದಿ:
ಸೋಷಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಮಹಾಪೂರ:
ಗಣೇಶ್ ಹುಟ್ಟುಹಬ್ಬಕ್ಕೆ ಸ್ಯಾಂಡಲ್‌ವುಡ್‌ನ ಪ್ರಮುಖ ನಟರು, ನಿರ್ದೇಶಕರು ಹಾಗೂ ತಾಂತ್ರಿಕ ಕಲಾವಿದರು ಸಾಮಾಜಿಕ ಜಾಲತಾಣಗಳ ಮೂಲಕ ಹಾರ್ದಿಕ ಶುಭ ಕೋರಿದ್ದಾರೆ. ಈ ಸಂಧರ್ಭದಲ್ಲಿ ಗಣೇಶ್ ಅಭಿಮಾನಿಗಳ ಸಂತೋಷವನ್ನು ದುಪ್ಪಟ್ಟು ಮಾಡುವಂತಹ ಬ್ರೇಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಗಣೇಶ್ ನಟನೆಯ ಎರಡು ಬಹುನಿರೀಕ್ಷಿತ ಸಿನಿಮಾಗಳು ಕೇವಲ 15 ದಿನಗಳ ಅಂತರದಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿವೆ.



