CINE | ರಕ್ಷಿತ್‌ ಶೆಟ್ಟಿ ಮೇಲೆ ಒತ್ತಡ ಹಾಕುವುದು ಸರಿಯಲ್ಲ: ಕಿಚ್ಚ ಸುದೀಪ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಿಚ್ಚ ಸುದೀಪ್ ಅವರು ತಮ್ಮ ಬಿಡುವಿನ ವೇಳೆಯಲ್ಲಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಬಹಳಷ್ಟು ಪ್ರಶ್ನೆಗಳನ್ನು ಕೇಳಿದರು. ಕಿಚ್ಚ ಸುದೀಪ್ ʻಥಗ್ಸ್​ ಆಫ್​ ಮಾಲ್ಗುಡಿʼ ಚಿತ್ರ ಮಾಡುತ್ತಾರೆ ಎಂದು ಈ ಹಿಂದೆ ಹೇಳಲಾಗಿತ್ತು. ಕಿಚ್ಚ ಸುದೀಪ್ ರಕ್ಷಿತ್ ಶೆಟ್ಟಿ ಜೊತೆ ಸಿನಿಮಾ ಮಾಡಬೇಕೆಂದು ಅಭಿಮಾನಿಗಳು ಬಯಸಿದ್ದರು.

ಇದೀಗ ಅಭಿಮಾನಿಯೊಬ್ಬರು ಸುದೀಪ್ ಅವರಿಗೆ ಒಂದು ಪ್ರಶ್ನೆಯನ್ನು ಕೇಳಿದ್ದಾರೆ, ರಕ್ಷಿತ್ ಶೆಟ್ಟಿ ಜೊತೆ ಥಗ್ಸ್ ಆಫ್ ಮಾಲ್ಗುಡಿ ಚಿತ್ರ ಮಾಡಲು ಇಷ್ಟಪಡುತ್ತೀರಾ? ನೀವಿಬ್ಬರೂ ಒಟ್ಟಿಗೆ ಸಿನಿಮಾ ಮಾಡಿದರೆ ಒಳ್ಳೆಯದು ಎಂದು ಹೇಳಿದ್ದಾರೆ.

ಇನ್ನು ಈ ಅಭಿಮಾನಿಯ ಪ್ರಶ್ನೆಗೆ ಉತ್ತರಿಸಿರುವ ಕಿಚ್ಚ ಸುದೀಪ್ , ಇದಕ್ಕೆ ಸುದೀಪ್ ಉತ್ತರಿಸಿದರು. ʻ‘ಅದು ಚೆನ್ನಾಗಿರುತ್ತದೆ ಎಂಬುದರ ಬಗ್ಗೆ ನನಗೆ ಖಾತರಿ ಇದೆ. ಈಗ ಅವರಿಗೆ ಅವರದ್ದೇ ಆದ ಜೀವನ ಇದೆ. ಅವರ ಮೇಲೆ ಒತ್ತಡ ಹಾಕುವುದು ಸರಿಯಲ್ಲ’ ಎಂದು ಸುದೀಪ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಉತ್ತರಿಸಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!