June 30, 2026
Tuesday, June 30, 2026
spot_img

‘ಪೆದ್ದಿ’ಗೆ ಕಮಲದ ಸಾಥ್: ಬಿಜೆಪಿ ಖಾತೆಗಳಲ್ಲಿ ರಾಮ್ ಚರಣ್ ಹವಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ ‘ಪೆದ್ದಿ’ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಚಿತ್ರದ ಪ್ರಚಾರ ಹೊಸ ಚರ್ಚೆಗೆ ಕಾರಣವಾಗಿದೆ.

ಬಿಜೆಪಿ ಪಕ್ಷದ ಹಲವು ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ರಾಮ್ ಚರಣ್ ಅವರ ವಿಡಿಯೋಗಳು ಕಾಣಿಸಿಕೊಂಡಿದ್ದು, ರಾಜಕೀಯ ಮತ್ತು ಸಿನಿಮಾ ವಲಯದಲ್ಲಿ ಗಮನ ಸೆಳೆದಿದೆ.

ಬಿಜೆಪಿ ಖಾತೆಗಳಲ್ಲಿ ರಾಮ್ ಚರಣ್

ರಾಷ್ಟ್ರೀಯ ಮಟ್ಟದಿಂದ ಹಿಡಿದು ವಿವಿಧ ರಾಜ್ಯಗಳ ಬಿಜೆಪಿ ಘಟಕಗಳ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ರಾಮ್ ಚರಣ್ ಅವರ ಭಾಷಣದ ತುಣುಕುಗಳನ್ನು ಹಂಚಿಕೊಳ್ಳಲಾಗಿದೆ. ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಕುರಿತು ಅವರು ಮಾತನಾಡಿರುವ ವಿಡಿಯೋಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ.

ಮೋದಿ ಭೇಟಿಯ ನೆನಪು

ಇತ್ತೀಚಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ರಾಮ್ ಚರಣ್, ಪ್ರಧಾನಿ ಮೋದಿ ಅವರೊಂದಿಗೆ ನಡೆದ ಮಾತುಕತೆಯನ್ನು ಸ್ಮರಿಸಿದ್ದರು. ಈ ವೇಳೆ ಕ್ರೀಡೆ, ಯುವಜನತೆ ಮತ್ತು ಗ್ರಾಮೀಣ ಪ್ರತಿಭೆಗಳ ಕುರಿತು ಮೋದಿ ಹಂಚಿಕೊಂಡಿದ್ದ ಕೆಲವು ವಿಚಾರಗಳನ್ನು ಅವರು ಉಲ್ಲೇಖಿಸಿದ್ದರು.

ಇದನ್ನೂ ಓದಿ:

‘ಪೆದ್ದಿ’ ಸುತ್ತ ಹೆಚ್ಚಿದ ಕುತೂಹಲ

ಚಿತ್ರದ ಕುರಿತು ಮಾತನಾಡಿದ್ದ ರಾಮ್ ಚರಣ್, ದೇಶದ ಅಭಿವೃದ್ಧಿ ಮತ್ತು ಯುವಶಕ್ತಿಯ ಆಶಯಗಳನ್ನು ಕಥೆಯಲ್ಲಿ ಪ್ರತಿಬಿಂಬಿಸಲಾಗಿದೆ ಎಂದು ಹೇಳಿದ್ದರು. ಇದೇ ಹೇಳಿಕೆಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿವೆ.

ಜೂನ್ 4ಕ್ಕೆ ಗ್ರ್ಯಾಂಡ್ ರಿಲೀಸ್

ಬುಚ್ಚಿಬಾಬು ಸನಾ ನಿರ್ದೇಶನದ ‘ಪೆದ್ದಿ’ ಚಿತ್ರದಲ್ಲಿ ರಾಮ್ ಚರಣ್ ಜೊತೆಗೆ ಶಿವರಾಜ್ ಕುಮಾರ್ ಹಾಗೂ ಜಾನ್ಹವಿ ಕಪೂರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ಬಿಡುಗಡೆಗೆ ಮುನ್ನವೇ ಚಿತ್ರದ ಸುತ್ತ ಚರ್ಚೆ ಜೋರಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !