ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಕಾಂತಾರ’ ಸಿನಿಮಾದಲ್ಲಿ ಲೀಲಾ ಪಾತ್ರದ ಮೂಲಕ ಮಿಂಚಿದ ನಟಿ ಸಪ್ತಮಿ ಗೌಡ, ಈಗ ತೆಲುಗು ಸಿನಿಮಾಗಳಲ್ಲೂ ತಮ್ಮ ಛಾಪು ಮೂಡಿಸಿ ಜನಪ್ರಿಯತೆ ಗಳಿಸಿದ್ದಾರೆ. ಇತ್ತೀಚೆಗೆ ಅವರು ವಿದೇಶದ ಸುಂದರ ತಾಣಗಳಲ್ಲಿ ಸಮಯ ಕಳೆಯುತ್ತಿದ್ದು, ಅಲ್ಲಿನ ಸುಂದರ ಸ್ಥಳಗಳಲ್ಲಿ ವಿಧ ವಿಧವಾಗಿ ಫೋಟೋಗಳಿಗೆ ಪೋಸ್ ನೀಡಿ ಅಭಿಮಾನಿಗಳ ಗಮನ ಸೆಳೆಯುತ್ತಿದ್ದಾರೆ.
ಸಪ್ತಮಿ ಗೌಡ ಅವರು ಸದ್ಯ ಸ್ವಿಟ್ಜರ್ಲ್ಯಾಂಡ್ನ ಬ್ಯೂಟಿಫುಲ್ ಲೊಕೇಶನ್‌ಗಳಲ್ಲಿ ರೌಂಡ್ ಹೊಡೆಯುತ್ತಿದ್ದಾರೆ. ತಮ್ಮ ಸ್ಟೈಲ್ ಮತ್ತು ಸ್ಮೈಲ್ ಮೂಲಕ ಪ್ರಕೃತಿಯ ಸೊಬಗಿನ ನಡುವೆ ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಸಪ್ತಮಿ, ಇತ್ತೀಚೆಗೆ ತೂಕ ಇಳಿಸಿಕೊಂಡು, ತೆಳ್ಳಗೆ ಬಳುಕುವ ಬಳ್ಳಿಯಂತೆ ಕಾಣುತ್ತಿದ್ದು, ಮತ್ತಷ್ಟು ಫಿಟ್ ಆಗಿ ಕಣ್ಮನ ಸೆಳೆಯುತ್ತಿದ್ದಾರೆ. ಹೊಸ ಹೊಸ ಉಡುಗೆಗಳಲ್ಲಿ, ಪ್ರಕೃತಿಯ ಸೊಬಗನ್ನು ಸವಿಯುತ್ತಾ ಅವರು ಸ್ವಿಟ್ಜರ್ಲ್ಯಾಂಡ್ನ ಬೀದಿಗಳಲ್ಲಿ ಸುತ್ತಾಡುತ್ತಿದ್ದಾರೆ.

ಸದ್ಯ ವಿಶ್ವದಾದ್ಯಂತ ‘ಕಾಂತಾರ ಚಾಪ್ಟರ್-1’ ಸಿನಿಮಾ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿರುವ ನಡುವೆಯೇ, ಚಿತ್ರದ ನಾಯಕಿ ಸ್ವಿಟ್ಜರ್ಲ್ಯಾಂಡ್ನ ಪ್ರವಾಸ ಕೈಗೊಂಡಿದ್ದಾರೆ. ಸಪ್ತಮಿ ಗೌಡರ ಈ ಹೊಸ ಪೋಸ್ಟ್‌ಗಳಿಗೆ ಅಭಿಮಾನಿಗಳಿಂದ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಫೋಟೋಗಳು ವೈರಲ್ ಆಗಿವೆ.

