Friday, February 23, 2024

CINE | ತಿರುಪತಿ ತಿಮ್ಮಪ್ಪನ ದರುಶನ ಪಡೆದ “ಕಾಟೇರ”

ಹೊಸದಿಗಂತ ಡಿಜಿಟಲ್ ಡೆಸ್ಕ್:

 

ಕಾಟೇರ ಸಿನಿಮಾದ ಯಶಸ್ಸಿನ ನಂತರ ಕಾಟೇರ ತಂಡವು ದೇವಾಲಯಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದಾರೆ. ಇದಕ್ಕೂ ಮುನ್ನ ನಿರ್ದೇಶಕ ತರುಣ್ ಸುಧೀರ್ ಅವರು ಧರ್ಮಸ್ಥಳ ಹಾಗೂ ಕೊರಗಜ್ಜನ ದೇವಸ್ಥಾನಕ್ಕೆ ತೆರಳಿ ದೇವರ ದರುಶನ ಪಡೆಡಿದ್ದರು. ಇಂದು ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ ನೀಡಿದ್ದಾರೆ.

ಮುಂದಿನ ವಾರ ದರ್ಶನ್ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ಅದಕ್ಕೂ ಮುನ್ನ ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆಡಿದ್ದಾರೆ. ತಮ್ಮ ಹುಟ್ಟುಹಬ್ಬ ಹಾಗೂ ಕಾಟೇರ ಚಿತ್ರದ ಯಶಸ್ಸಿನ ನಿಮಿತ್ತ ದೇಗುಲಕ್ಕೆ ಭೇಟಿ ನೀಡಿದರು ಎನ್ನಲಾಗಿದೆ.

ಹುಟ್ಟುಹಬ್ಬದ ಪ್ರಯುಕ್ತ ದರ್ಶನ್ ಈಗಾಗಲೇ ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ. ಕೇಕ್, ಹೂ ಮಾಲೆ ಬದಲು ಅಕ್ಕಿ, ದವಸ ಧಾನ್ಯಗಳು, ಆಹಾರ ಪದಾರ್ಥಗಳನ್ನು ನೀಡುವಂತೆ ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!