October 16, 2026
Friday, October 16, 2026
spot_img

CINE | ಲ್ಯಾಂಡ್‌ಲಾರ್ಡ್ ಸಿನಿಮಾ ಒಟಿಟಿಗೆ ಎಂಟ್ರಿ: ಯುಗಾದಿ ವೇಳೆಗೆ ಸ್ಟ್ರೀಮಿಂಗ್ ಆಗುತ್ತಂತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದುನಿಯಾ ವಿಜಯ್ ಅಭಿನಯದ ಸಾಮಾಜಿಕ ಕಥಾಹಂದರ ಹೊಂದಿರುವ ‘ಲ್ಯಾಂಡ್‌ಲಾರ್ಡ್’ ಸಿನಿಮಾ ಇದೀಗ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡು ಪ್ರೇಕ್ಷಕರ ಗಮನ ಸೆಳೆದಿದ್ದ ಈ ಚಿತ್ರ ಶೀಘ್ರದಲ್ಲೇ ಡಿಜಿಟಲ್ ಪ್ಲಾಟ್‌ಫಾರ್ಮ್ ಮೂಲಕ ಮತ್ತೊಮ್ಮೆ ಸಿನಿಪ್ರಿಯರ ಮುಂದೆ ಬರಲಿದೆ.

ಜಡೇಶ್ ಕೆ ಹಂಪಿ ನಿರ್ದೇಶನದ ಈ ಸಿನಿಮಾ ಜಾತಿ ವ್ಯವಸ್ಥೆ ಮತ್ತು ಜೀತ ಪದ್ಧತಿಯಂತಹ ಗಂಭೀರ ಸಾಮಾಜಿಕ ವಿಷಯಗಳನ್ನು ಒಳಗೊಂಡ ಕಥೆಯನ್ನು ಹೇಳುತ್ತದೆ. ಚಿತ್ರದಲ್ಲಿ ದುನಿಯಾ ವಿಜಯ್ ವಿಭಿನ್ನ ಹಾಗೂ ಪ್ರಭಾವಶಾಲಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ನಾಯಕಿಯಾಗಿ ರಚಿತಾ ರಾಮ್ ಕೂಡ ವಯಸ್ಸಾದ ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ವಿಶೇಷ.

ಈ ಸಿನಿಮಾದಲ್ಲಿ ದುನಿಯಾ ವಿಜಯ್ ಪುತ್ರಿ ರಿತನ್ಯ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ರಾಜ್ ಬಿ ಶೆಟ್ಟಿ ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಉಮಾಶ್ರೀ ಮತ್ತು ಸಿರೀಶ್ ಬೈಕಾಡಿ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ:

ಮಾಹಿತಿಯ ಪ್ರಕಾರ ‘ಲ್ಯಾಂಡ್‌ಲಾರ್ಡ್’ ಸಿನಿಮಾ ಜೀ5 ಒಟಿಟಿ ವೇದಿಕೆಯಲ್ಲಿ ಮಾರ್ಚ್ 13ರಂದು ಸ್ಟ್ರೀಮಿಂಗ್ ಆಗುವ ಸಾಧ್ಯತೆ ಇದೆ. ಮತ್ತೊಂದು ವರದಿಯಂತೆ ಯುಗಾದಿ ಹಬ್ಬದ ಸಮಯದಲ್ಲಿ, ಅಂದರೆ ಮಾರ್ಚ್ 18ರ ವೇಳೆಗೆ ಬಿಡುಗಡೆಯಾಗಬಹುದು ಎನ್ನಲಾಗುತ್ತಿದೆ.

ಚಿತ್ರಮಂದಿರಗಳಲ್ಲಿ ಬಿಡುಗಡೆಯಾದಾಗ ಈ ಸಿನಿಮಾಗೆ ತೆರಿಗೆ ವಿನಾಯಿತಿ ದೊರೆತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸಿನಿಮಾ ವೀಕ್ಷಿಸಿ ತಂಡದ ಪ್ರಯತ್ನವನ್ನು ಮೆಚ್ಚಿಕೊಂಡಿದ್ದರು. ಇದೀಗ ಒಟಿಟಿಯಲ್ಲಿ ಬಿಡುಗಡೆಯಾಗಿ ಮತ್ತಷ್ಟು ಪ್ರೇಕ್ಷಕರನ್ನು ಸೆಳೆಯುವ ನಿರೀಕ್ಷೆ ಇದೆ.

Must Read