CINE | ದಿ ಕೇರಳ ಸ್ಟೋರಿ 2ಗೆ ಕಾನೂನು ಸಂಕಷ್ಟ: ತಡೆ ಕೋರಿ ಹೈಕೋರ್ಟ್​​ಗೆ ಅರ್ಜಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಚಿತ್ರದಲ್ಲಿ ಕೋಮುವಾದಕ್ಕೆ ಉತ್ತೇಜನ ನೀಡುವ ಅಂಶಗಳಿವೆ ಎಂಬ ಆರೋಪ ಕೇಳಿಬಂದಿದ್ದು, ಕೇರಳದಲ್ಲಿ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ಕಣ್ಣೂರಿನ ಶ್ರೀದೇವ್ ಎಂಬವರು ಚಿತ್ರದ ವಿರುದ್ಧ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಟ್ರೇಲರ್‌ನಲ್ಲಿ ತೋರಿಸಿರುವ ಕೆಲವು ವಿಷಯಗಳು ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಸಾಧ್ಯತೆ ಇದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ, ಚಿತ್ರಕ್ಕೆ ಪ್ರಮಾಣಪತ್ರ ನೀಡಿದ ಸೆನ್ಸಾರ್ ಮಂಡಳಿಯ ನಿರ್ಧಾರವನ್ನೂ ಪ್ರಶ್ನಿಸಲಾಗಿದೆ. … Continue reading CINE | ದಿ ಕೇರಳ ಸ್ಟೋರಿ 2ಗೆ ಕಾನೂನು ಸಂಕಷ್ಟ: ತಡೆ ಕೋರಿ ಹೈಕೋರ್ಟ್​​ಗೆ ಅರ್ಜಿ!