CINE | ಚಿತ್ರರಂಗಕ್ಕೆ ಎಂಟ್ರಿ ಕೊಡೋಕೆ ರೆಡಿಯಾದ ಮಲಯಾಳಂನ ಸೂಪರ್‌ಸ್ಟಾರ್ ನಟನ ಮಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಲಯಾಳಂನ ಸೂಪರ್‌ಸ್ಟಾರ್ ಮೋಹನ್‌ಲಾಲ್ ಮಗಳು ವಿಸ್ಮಯಾ ಮೋಹನ್‌ಲಾಲ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡೋಕೆ ರೆಡಿಯಾಗಿದ್ದಾರೆ.

ಮೋಹನ್‌ಲಾಲ್ ಪುತ್ರ ಪ್ರಣವ್ ಈಗಾಗ್ಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ಪುತ್ರಿ ಚಿತ್ರರಂಗದಲ್ಲಿ ನಾಯಕಿಯಾಗಿ ಲಾಂಚ್ ಆಗುತ್ತಿದ್ದಾರೆ. ಈ ಖುಷಿ ವಿಚಾರವನ್ನ ಮೋಹನ್‌ಲಾಲ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಆಶೀರ್ವಾದ್ ಸಿನಿಮಾಸ್ ಬ್ಯಾನರ್‌ನಲ್ಲಿ ಜ್ಯೂಡ್ ಆ್ಯಂಟನಿ ಜೊಸೆಫ್ ನಿರ್ದೇಶನದ ಸಿನಿಮಾದ ಮೂಲಕ ಮೋಹನ್‌ಲಾಲ್ ಪುತ್ರಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡ್ತಿದ್ದಾರೆ. ಈ ಮೊದಲು ಸಹಾಯಕ ನಿರ್ದೇಶಕಿಯಾಗಿ ಕೂಡಾ ಕಾರ್ಯ ನಿರ್ವಹಿಸಿರುವ ವಿಸ್ಮಯ ಈ ಚಿತ್ರಕ್ಕಾಗಿ ತಯಾರಿ ನಡೆಸಿದ್ದಾರೆ.

ಇನ್ನು ಮೋಹನ್‌ಲಾಲ್ ಪುತ್ರ ಮೊದಲ ಸಿನಿಮಾದಲ್ಲೇ ಜನಮನ ಸೆಳೆದಿದ್ದರು. ಇದೀಗ ಪುತ್ರಿ ಕೂಡಾ ಚಿತ್ರರಂಗದಲ್ಲಿ ಯಶಸ್ವಿಯಾಗಲಿ ಅಂತಾ ಮೋಹನ್‌ಲಾಲ್ ಅಭಿಮಾನಿ ವರ್ಗ ಹಾರೈಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!