March 6, 2026
Friday, March 6, 2026
spot_img

CINE | ‘ವಾರಣಾಸಿ’ ಮುಗಿಸಿದ ಮಂದಾಕಿನಿ: ಹೈದರಾಬಾದ್ to ಲಾಸ್ ಏಂಜಲಿಸ್‌! ಪಿಗ್ಗಿ ಪಯಣ ಶುರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷಿತ ಪ್ರಾಜೆಕ್ಟ್‌ಗಳಲ್ಲಿ ಒಂದಾಗಿ ಹೆಸರು ಮಾಡುತ್ತಿರುವ ಎಸ್.ಎಸ್. ರಾಜಮೌಳಿ ನಿರ್ದೇಶನದ ಮಹೇಶ್ ಬಾಬು ನಟನೆಯ ‘ವಾರಣಾಸಿ’ ಸಿನಿಮಾ ಈಗಾಗಲೇ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಭಾರಿ ಬಜೆಟ್ ಸಿನಿಮಾದಲ್ಲಿ ಪ್ರಿಯಾಂಕಾ ಚೋಪ್ರಾ ನಾಯಕಿಯಾಗಿ ಕಾಣಿಸಿಕೊಂಡಿದ್ದು, ತಮ್ಮ ಭಾಗದ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಸುಮಾರು ಒಂದು ತಿಂಗಳ ಕಾಲ ಹೈದರಾಬಾದ್ ಹಾಗೂ ವಾರಣಾಸಿ ಪ್ರದೇಶಗಳಲ್ಲಿ ಶೂಟಿಂಗ್‌ನಲ್ಲಿ ಭಾಗವಹಿಸಿದ್ದ ಪ್ರಿಯಾಂಕಾ, ಇದೀಗ ಲಾಸ್ ಏಂಜಲಿಸ್‌ಗೆ ಮರಳುತ್ತಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ‘ಒಂದು ತಿಂಗಳಿನಿಂದ ಹೈದರಬಾದ್ ನಲ್ಲಿದ್ದೇ. ವಾರಣಾಸಿ ಶೂಟ್ ನಲ್ಲಿ ಪಾಲ್ಗೊಂಡಿದ್ದೇ.. ಇದೀಗ ಶೂಟಿಂಗ್ ಮುಗಿಸಿ ಹೊರಡ್ತಾ ಇದ್ದೇನೆ’ ಅಂತ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:

ಇದರ ಜೊತೆಗೆ, ಪ್ರಿಯಾಂಕಾ ‘ಕ್ರಿಶ್ 4’ ಚಿತ್ರದ ಮೂಲಕ ಮತ್ತೆ ಬಾಲಿವುಡ್‌ಗೆ ವಾಪಸ್ಸಾಗುತ್ತಿರುವುದು ಅಧಿಕೃತವಾಗಿ ದೃಢಪಟ್ಟಿದೆ. ಹಲವು ವರ್ಷಗಳಿಂದ ಹಾಲಿವುಡ್‌ನಲ್ಲಿ ತೊಡಗಿಸಿಕೊಂಡಿದ್ದ ಅವರು, ಕೊನೆಯಾಗಿ 2019ರಲ್ಲಿ ‘ದಿ ಸ್ಕೈ ಇಸ್ ಪಿಂಕ್’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಈಗ ಮತ್ತೆ ಭಾರತೀಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !