ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್‌ನ ಪ್ರತಿಭಾವಂತ ನಟ ಮನೋಜ್ ಬಾಜಪೇಯಿ ಇದೇ ಮೊದಲ ಬಾರಿಗೆ ಮಹಾತ್ಮ ಗಾಂಧಿ ಗೆಟಪ್ ನಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ.
ಭಾರತ ಸ್ವಾತಂತ್ರ್ಯ ಪಡೆಯುವ ಸುತ್ತಮುತ್ತಲಿನ ಗಾಂಧೀಜಿಯವರ ಜೀವನದ ಅತ್ಯಂತ ನಿರ್ಣಾಯಕ 21 ದಿನಗಳ ಅವಧಿಯನ್ನು ಆಧರಿಸಿ ಚಿತ್ರವನ್ನು ರೂಪಿಸಲಾಗುತ್ತಿದ್ದು, ರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕ ಸುಧೀರ್ ಮಿಶ್ರಾ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ.
ಇದನ್ನೂ ಓದಿ:
ಲಖನೌನಲ್ಲಿ ಚಿತ್ರೀಕರಣ
ಚಿತ್ರದ ಚಿತ್ರೀಕರಣ ಈಗಾಗಲೇ ಆರಂಭವಾಗಿದ್ದು, ಸದ್ಯ ಲಖನೌನಲ್ಲಿ ಹೊರಾಂಗಣ ದೃಶ್ಯಗಳನ್ನು ಚಿತ್ರೀಕರಿಸಲಾಗುತ್ತಿದೆ. ಚಿತ್ರಕ್ಕೆ ಸದ್ಯಕ್ಕೆ ‘Gandhi and My Mother’ ಎಂಬ ತಾತ್ಕಾಲಿಕ ಶೀರ್ಷಿಕೆ ಇಡಲಾಗಿದೆ.ಮನೋಜ್ ಬಾಜಪೇಯಿ ಜೊತೆಗೆ ದಿವ್ಯಾ ದತ್ತಾ ಹಾಗೂ ಸೌರಭ್ ಶುಕ್ಲಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಚಿತ್ರಕ್ಕೆ ಅನುಭವ್ ಸಿನ್ಹಾ ಬಂಡವಾಳ ಹೂಡುತ್ತಿದ್ದಾರೆ. ಗಾಂಧಿ ಪಾತ್ರಕ್ಕಾಗಿ ಮನೋಜ್ ಬಾಜಪೇಯಿ ಸಾಕಷ್ಟು ತೂಕ ಇಳಿಸಿಕೊಂಡಿದ್ದು, ನಿರ್ದಿಷ್ಟ ಆಹಾರ ಕ್ರಮ ಹಾಗೂ ಜೀವನಶೈಲಿಯನ್ನು ಅನುಸರಿಸುತ್ತಿದ್ದಾರೆ ಎಂದು ಸಿನ್ಹಾ ಹೇಳಿದ್ದಾರೆ.



