ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಧ್ರುವ ಸರ್ಜಾ ನಟನೆಯ ಚಿತ್ರ ಮಾರ್ಟಿನ್‌ಗಾಗಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಮಾರ್ಟಿನ್ ಚಿತ್ರದ ಹಾಡಿನ ಚಿತ್ರೀಕರಣ ಗೋವಾದಲ್ಲಿ ನಡೆಯುತ್ತಿದ್ದು, ಈ ಹಾಡಿನಲ್ಲಿ ಧ್ರುವ ಸರ್ಜಾ ಅವರು ಆಪ್ರೋ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.
ಹೌದು, ಬಹುನಿರೀಕ್ಷಿತ ಚಿತ್ರ ಮಾರ್ಟಿನ್ ಚಿತ್ರೀಕರಣ ಮುಗಿಯುವ ಹಂತದಲ್ಲಿದ್ದು, ಈ ಸಿನಿಮಾದ ಹಾಡಿನ ಚಿತ್ರೀಕರಣ ಗೋವಾ ದಲ್ಲಿ ನಡೆಯುತ್ತಿದೆ. ಧ್ರುವ ಸರ್ಜಾ ಕೂಡ ಭಾಗಿಯಾಗಿದ್ದು ಆಪ್ರೋ ಲುಕ್ ನಲ್ಲಿರುವ ಅವರ ಫೋಟೋವನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುತ್ತಿದ್ದಾರೆ.