CINE | ಹಸೆಮಣೆ ಏರಲು ಸಜ್ಜಾದ​ ಮಿಲ್ಕಿ ಬ್ಯೂಟಿ, ವೆಡ್ಡಿಂಗ್​ ಯಾವಾಗ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನ ಮಿಲ್ಕಿ ಬ್ಯೂಟಿ ತಮನ್ನಾ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಬಾಲಿವುಡ್ ನಟ ವಿಜಯ್ ವರ್ಮಾ ಜೊತೆ ಸಪ್ತಪದಿ ತುಳಿಯಲು ರೆಡಿಯಾಗಿದ್ದಾರೆ. ಇದೀಗ ಇಬ್ಬರು ನವ ಜೋಡಿಗಳು ಮದುವೆ ತಯಾರಿಯಲ್ಲಿ ಬ್ಯುಸಿ ಆಗಿ ಇದ್ದಾರೆ.

ವಿಜಯ್ ವರ್ಮಾ ಮತ್ತು ತಮನ್ನಾ ಹಲವಾರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇವರಿಬ್ಬರು ಆಗಾಗ ಸೆಲೆಬ್ರಿಟಿ ಶೋಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇದೀಗ ಈ ಜೋಡಿ ಮದುವೆ ತಯಾರಿಯಲ್ಲಿ ನಿರತವಾಗಿದೆ.

ತಮನ್ನಾ ಬಾಲಿವುಡ್ ಮಾತ್ರವಲ್ಲದೆ ಟಾಲಿವುಡ್ ಮತ್ತು ಕಾಲಿವುಡ್‌ನಲ್ಲಿಯೂ ಬಣ್ಣ ಹಚ್ಚಿದ್ದಾರೆ. ಇದೀಗ ಈ ಜೋಡಿ ಮದುವೆಗೆ ತಯಾರಿ ನಡೆಸಿದ್ದು, ವಿದೇಶದಲ್ಲಿ ಮದುವೆಯಾಗಲು ಮುಂದಾಗಿದ್ದಾರೆ.

ಮಾಹಿತಿಯ ಪ್ರಕಾರ, ತಮನ್ನಾ ಅವರು ವಿವಾಹ ಸಮಾರಂಭಕ್ಕಾಗಿ ರೆಸಾರ್ಟ್ ಫೈನಲ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸೆಲೆಬ್ರಿಟಿ ಜೋಡಿ ಎಲ್ಲಿ ಮದುವೆಯಾಗುತ್ತಾರೆ? ಎಂಬುದು ಕುತೂಹಲ ಮೂಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!