ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಕೀಯದಲ್ಲಿ ನಿರತರಾಗಿರುವ ಪವನ್ ಕಲ್ಯಾಣ್ ಕಳೆದ ಕೆಲ ತಿಂಗಳುಗಳಿಂದಲೂ ಚಿತ್ರರಂಗದಿಂದ ದೂರವೇ ಉಳಿದಿದ್ದರು. ಉಪ ಮುಖ್ಯಮಂತ್ರಿ ಆದ ಬಳಿಕ ಬಿಡುವು ಪಡೆದು ಮತ್ತೆ ಚಿತ್ರೀಕರಣದಲ್ಲಿ ಪಾಲ್ಗೊಂಡ ಪವನ್ ಕಲ್ಯಾಣ್, ಇದೀಗ ಒಂದು ಸಿನಿಮಾದ ಚಿತ್ರೀಕರಣ ಮುಗಿಸಿದ್ದು, ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ.
‘ಹರಿಹರ ವೀರಮಲ್ಲು’ ಪವನ್ ಕಲ್ಯಾಣ್ ನಟಿಸುತ್ತಿರುವ ಮೊದಲ ಐತಿಹಾಸಿಕ ಕತೆಯುಳ್ಳ ಸಿನಿಮಾ ಆಗಿದೆ. ಆರಂಭದ ಕೆಲ ಸಮಯ ರಾಜಕೀಯ ಕೆಲಸಗಳಲ್ಲಿ ತೊಡಗಿಕೊಂಡಿದ್ದ ಪವನ್ ಕಲ್ಯಾಣ್, ನಿರ್ಮಾಪಕರ ಒತ್ತಾಯದ ಮೇರೆಗೆ ಚಿತ್ರೀಕರಣದಲ್ಲಿ ಭಾಗವಹಿಸಿ ಚಿತ್ರೀಕರಣ ಮುಗಿಸಿದ್ದಾರೆ.
ಇದೀಗ ‘ಹರಿಹರ ವೀರಮಲ್ಲು’ ಸಿನಿಮಾ ಮೇ 9ರಂದು ರಿಲೀಸ್ ಆಗಲಿದೆ. ಈ ಸಿನಿಮಾದ ಮೊದಲ ಭಾಗವಷ್ಟೆ ಈಗ ಬಿಡುಗಡೆ ಆಗುತ್ತಿದೆ. ಈ ಸಿನಿಮಾವನ್ನು ಖ್ಯಾತ ನಿರ್ದೇಶಕ ಕ್ರಿಶ್ ನಿರ್ದೇಶಿಸಿದ್ದಾರೆ.