CINE | ಪ್ರಭಾಸ್ ನಟನೆಯ ಬಹುನಿರೀಕ್ಷಿತ ಚಿತ್ರ “ಕಲ್ಕಿ” ರಿಲೀಸ್ ಡೇಟ್ ಫಿಕ್ಸ್, ಚಿತ್ರತಂಡದಿಂದ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಭಾಸ್ ಅಭಿನಯದ ಕಲ್ಕಿ ಚಿತ್ರದ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಜೂನ್ 27 ರಂದು ವಿಶ್ವಾದ್ಯಂತ ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಹೊಸ ಪೋಸ್ಟರ್ ಕೂಡ ಬಿಡುಗಡೆಯಾಗಿದೆ.

ಈ ಚಿತ್ರ ಒಂದರ ಹಿಂದೆ ಒಂದರಂತೆ ಸುದ್ದಿ ಆಗುತ್ತಲೇ ಇದೆ. ಈ ಬಾರಿ ಕಲಾವಿದರ ಸಂಭಾವನೆ ಬಗ್ಗೆ ಸಖತ್ ಚರ್ಚೆಯಾಗುತ್ತಿದೆ. ಮೂಲಗಳ ಪ್ರಕಾರ, ನಿರ್ಮಾಪಕರು ಕಲಾವಿದರಿಗೆ 250 ಕೋಟಿ ರೂ.ಗೂ ಹೆಚ್ಚು ಖರ್ಚು ಮಾಡಿದ್ದಾರೆ. ಅತಿ ಹೆಚ್ಚು ಸಂಭಾವನೆ ಪಡೆಯುವ ನಟ ಪ್ರಭಾಸ್ ಆಗಿದ್ದಾರೆ.

ಈ ಚಿತ್ರಕ್ಕಾಗಿ ನಿರ್ದೇಶಕ ಪ್ರಭಾಸ್ 150 ಮಿಲಿಯನ್ ಪಡೆದಿದ್ದಾರೆ ಎಂದು ವರದಿಯಾಗಿದೆ. ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಮತ್ತು ಕಮಲ್‌ ಹಾಸನ್‌ ತಲಾ 20 ಕೋಟಿ. ದಿಶಾ ಪಟಾಣಿ 5 ಕೋಟಿ ರೂಪಾಯಿಗೆ ತೃಪ್ತಿ ಪಟ್ಟಿದ್ದಾರೆ. ಲಕ್ಷದಲ್ಲಿ ಸಂಭಾವನೆ ಪಡೆಯುವ ಅನೇಕ ನಟರೂ ಈ ಸಿನಿಮಾದಲ್ಲಿ ಇದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!