ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಸಲ್ಮಾನ್ ಖಾನ್ ‘ಸಿಕಂದರ್’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ವಿಶೇಷ ಸಂದರ್ಶನದಲ್ಲಿ ಸಲ್ಮಾನ್ ಭಾಗಿಯಾಗಿದ್ದಾರೆ. ಈ ವೇಳೆ, ರಶ್ಮಿಕಾ ಮಂದಣ್ಣ ಬಗ್ಗೆ ಹಾಡಿ ಹೊಗಳಿದ್ದಾರೆ.
ಸಂದರ್ಶನದಲ್ಲಿ ಸಲ್ಮಾನ್ ಮಾತನಾಡಿ, ರಶ್ಮಿಕಾ ಮಂದಣ್ಣ ಅವರು ಹಾರ್ಡ್ ವರ್ಕರ್, ಆಕೆ ಅದ್ಭುತ ನಟಿ. ನಾವು ಹೈದರಾಬಾದ್‌ನಲ್ಲಿ ಚಿತ್ರೀಕರಣದಲ್ಲಿದ್ದಾಗ, ಅವರು ಬೆಳಿಗ್ಗೆ 6 ಗಂಟೆಗೆ ಸಿದ್ಧರಾಗಿ ಚಿತ್ರೀಕರಣದಲ್ಲಿ ಇರುತ್ತಿದ್ದರು. ಅವರಿಗೆ ಜ್ವರ ಬಂದಾಗಲೂ, ವಿಶ್ರಾಂತಿ ಇಲ್ಲದೆ ಕೆಲಸ ಮಾಡುತ್ತಿದ್ದರು. ಇನ್ನೂ ಅವರು ಒಂದು ಸೆಟ್‌ನಿಂದ ಮತ್ತೊಂದು ಸೆಟ್‌ಗೆ ಹೋಗುವ ಪ್ರಯಾಣದ ಸಮಯದಲ್ಲಿ ವಿಶ್ರಾಂತಿ ಪಡೆಯತ್ತಿದ್ದರು ಎಂದು ನಟಿ ಬಗ್ಗೆ ಹೇಳಿದ್ದಾರೆ.